ನಿಮ್ದೇ ಈ ಹೈವೆ : ಬಿಜೆಪಿ ಟ್ವಿಟ್

Date:

ಬೆಂಗಳೂರು – ಮೈಸೂರು ಹೆದ್ದಾರಿ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಘಟಕ ಹೊಸ ಟ್ವೀಟ್ ಮಾಡಿದೆ. ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ 23 ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಸಿದ್ಧವಾಗಿದೆ ಎಂದು ಕರ್ನಾಟಕ ಬಿಜೆಪಿ ಪ್ರಕಟಿಸಿದೆ.

ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಸಂಚಾರಕ್ಕೆ ಮುಕ್ತವಾಗಿರುವ ಬೈಪಾಸ್ ನ ವಿಡಿಯೋವನ್ನು ಅಪ್ಲೋಡ್ ಮಾಡಿ, “ನಿಮ್ದೇ ಈ ಹೈವೆ” ಎಂದು ಹೇಳಿದೆ. ವಿಡಿಯೋ ಹಾಕುವುದರ ಜೊತೆಗೆ ಕಾಂಗ್ರೆಸ್ ಹಾಗೂ ವಿಪಕ್ಷಗಳಿಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಪಕ್ಷ, ‘ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ ಕೊಡುವುದು ಬಿಜೆಪಿಯ ಗುಣ. ಪ್ರಧಾನಿ ಶ್ರೀ ಪ್ರಧಾನಿ ನರೇಂದ್ರ ಮೋದಿಯವರ ಕನಸು ಮತ್ತು ಬೊಮ್ಮಾಯಿ ಸರ್ಕಾರದ ಒತ್ತಾಸೆಯ ಫಲ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ 23 ಕಿ.ಮೀ. ಬೈಪಾಸ್ ಸಾರ್ವಜನಿಕರ ಓಡಾಟಕ್ಕೆ ಮುಕ್ತವಾಗಿದೆ’ ಎಂದು ಹೇಳಿದೆ. ಜೊತೆಗೆ, ಜನಸ್ನೇಹಿ ಬಿಜೆಪಿಸರ್ಕಾರ ಎಂಬ ಹ್ಯಾಶ್ ಟ್ಯಾಗ್ ಅನ್ನೂ ಬಳಸಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...