ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಾಗಿದ್ದರೆ, ಅದಕ್ಕೆ ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಮೋದಿಯಲ್ಲ. 60 ವರ್ಷಗಳಲ್ಲಿ ಏನೂ ಕೊಡಲು ಸಾಧ್ಯವಾಗದ ಹೇಡಿ ಕಾಂಗ್ರೆಸ್ ಮೋದಿ ವಿರುದ್ಧ ಆರೋಪ ಮಾಡುತ್ತಿದೆ ಎಂದರೆ ಜನ ಅವರನ್ನು ಮೂರ್ಖ ಎನ್ನುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ವೇಳೆ ಪ್ರಧಾನಿ ಮೋದಿ ಮೈಸೂರಿಗೆ ಬಂದು ಕನ್ನಡ ನಾಡಿದ ಜನತೆಯ ಜೊತೆ ಯೋಗ ಮಾಡಿ ಜಗತ್ತಿಗೆ ಸಂದೇಶ ಕೊಟ್ಟಿದ್ದಾರೆ. ಕನ್ನಡ ನಾಡಿನಲ್ಲಿ ಯೋಗ ದಿನ ಆಚರಿಸಿದ್ದಕ್ಕೆ ಮೋದಿಗೆ ಧನ್ಯವಾದ ಸಲ್ಲಿಸುವುದಾಗಿ ಕಟೀಲ್ ಹೇಳಿದರು.