ಪ್ರಧಾನಿ ಅಂಗಳಕ್ಕೆ ತಲುಪಿದ ಜಗನ್-ಚಂದ್ರಬಾಬು ಬ್ಲಾಕ್‍ಮನಿ ಫೈಟ್..!

Date:

ಕಪ್ಪು ಹಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಹಾಗೂ ಪ್ರತಿ ಪಕ್ಷ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ನಡುವಿನ ವಾಗ್ವಾದ ತೀವ್ರಗತಿಯಲ್ಲಿ ಮುಂದುವರೆದಿದ್ದು ಇದೀಗ ಇಬ್ಬರ ಜಗಳದ ಕುರಿತಾಗಿ ಪ್ರಧಾನಿ ಮೋದಿ ಅವರ ಅಂಗಳಕ್ಕೆ ತಲುಪಿದೆ. ಕೇಂದ್ರ ಸರ್ಕಾರದ ಕಪ್ಪು ಹಣ ಯೋಜನೆ (ಐಡಿಎಸ್) ಅಡಿಯಲ್ಲಿ ಹೈದ್ರಾಬಾದ್‍ನ ವ್ಯಕ್ತಿಯೋರ್ವರು 10 ಸಾವಿರ ಕೋಟಿ ಕಪ್ಪು ಹಣ ಘೋಷಿಸಿಕೊಂಡ ಬೆನ್ನಲ್ಲೇ ಚಂದ್ರಬಾಬು ನಾಯ್ಡು ನೀಡಿದ ಹೇಳಿಕೆ ಈಗ ವಿವಾದಕ್ಕೆ ಗುರಿಯಾಗಿದೆ.
ಕಪ್ಪು ಹಣ ವಿಷಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಚಂದ್ರಬಾಬು ಅವರು ಕಪ್ಪು ಹಣ ಬಹುಷಃ ನನ್ನ ರಾಜಕೀಯ ವೈರಿಗಳ ಖಾತೆಯದ್ದೇ ಇರಬಹುದು ಎಂದು ಪರೋಕ್ಷವಾಗಿ ವೈಎಸ್‍ಆರ್ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದರು. ನಾಯ್ಡು ಅವರ ಈ ಹೇಳಿಕೆಯನ್ನು ವಿರೋಧಿಸಿದ ಜಗನ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
2016ರ ಐಡಿಎಸ್ ಪಟ್ಟಿಯನ್ನು ಪ್ರಕಿಟಿಸುವಂತೆ ಮತ್ತು ಆಂಧ್ರ ಮುಖ್ಯಮಂತ್ರಿಯನ್ನು ಬ್ರಷ್ಟಾಚಾರ ಆರೋಪದ ಬಗ್ಗೆ ಕೂಡಲೇ ತನಿಖೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ. ಐಎಸ್‍ಡಿ ಯೋಜನೆಯಡಿ ಹೈದರಾಬಾದಿನಿಂದ ಒಟ್ಟಾರೆ 13 ಸಾವಿರ ಕೋಟಿ ಕಪ್ಪು ಹಣ ಘೋಷಣೆಯಾಗಿದೆ. ಈ ಪೈಕಿ 10 ಸಾವಿರ ಕೋಟಿ ಹಣ ಹೈದ್ರಾಬಾದ್ ಮೂಲದ ಉದ್ಯಮಿ ಹೆಸರಿನಿಂದ ಘೋಷಣೆಯಾಗಿದೆ. ಆದರೆ ಕಾನೂನಿನ ಪ್ರಕಾರವಾಗಿ ಆ ವ್ಯಕ್ತಿ ಯಾರು ಎಂಬ ಮಾಹಿತಿ ಬಹಿರಂಗಪಡಿಸಿಲ್ಲ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

POPULAR  STORIES :

ಇನ್ನು ಕ್ರಿಕೆಟ್ ಮೈದಾನದಲ್ಲಿ 14 ಜನ ಫೀಲ್ಡರ್..!

ಪುಣೆಯಲ್ಲಿ ಭುಗಿಲೆದ್ದ ದಲಿತರು-ಮರಾಠರ ಸಂಘರ್ಷ..!

ವಿಷ ಕುಡಿದು ಆತ್ಮಹತ್ಯೆ ಯತ್ನಿಸುವ ನಾಟಕವಾಡಿದ ರೈತನ ವಿಡಿಯೋ ವೈರಲ್..!

ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್.. ಸ್ಪೀಡ್ ಕಳೆದುಕೊಳ್ಳುತ್ತಿದೆ ಜಿಯೋ ಸಿಮ್..!

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಶ್ವಿನ್ ನಂ.1 ಬೌಲರ್..!

60 ಕೋಟಿ ಹರಾಜು ಕೂಗಿ ನಂಬರ್ ಪ್ಲೇಟ್ ಪಡೆದ ಭಾರತೀಯ ಉದ್ಯಮಿ..!

ಕಾಂಪೌಂಡ್ ವಿಚಾರವಾಗಿ ಎರಡು ಕುಟುಂಬಗಳ ಸಿನಿಮೀಯ ರೀತಿಯಲ್ಲಿ ಬಡಿದಾಟ..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...