ಅಂಧರ ವಿಶ್ವಕಪ್ ನಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ಅನ್ನು ಮಣಿಸಿ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಯುಎಇನ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ 5ನೇ ಅಂಧರ ವಿಶ್ವಕಪ್ ನಲ್ಲಿ ಭಾರತ ತಂಡ ರೋಚಕ ಗೆಲುವು ದಾಖಲಿಸಿ ಸತತ ಎರಡನೇ ಬಾರಿ ವಿಶ್ವಕಪ್ ಗೆ ಮುತ್ತಿಕ್ಕಿತು.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 40 ಓವರ್ ಗಳಲ್ಲಿ 308 ರನ್‍ಗಳನ್ನು ಗಳಿಸಿತು. ಬೃಹತ್ ಮೊತ್ತ ಬೆನ್ನತ್ತಿದ ಭಾರತ ಎಂಟು ವಿಕೆಟ್ ಕಳೆದುಕೊಂಡು 309 ರನ್ ಗಳ ಗುರಿ ತಲುಪಿತು.
ಭಾರತದ ಪರ ಸುನಿಲ್ ರಮೇಶ್ 93 ರನ್ ಸಿಡಿಸಿ ಶತಕ ವಂಚಿತರಾದರು. ಅಜಯ್ ತಿವಾರಿ 62 ರನ್ ಗಳ ಕೊಡುಗೆ ನೀಡಿದ್ರು.