ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ನಿಂದಾಗಿ ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆರ್ಥಿಕ ಸಂಕಷ್ಟದಿಂದ ಪಾರು ಮಾಡೋದೆ ಸರ್ಕಾರದ ಸಂಕಲ್ಪ ಮಾಡಬೇಕಾಗಿದೆ . ಬೆಂಗಳೂರಿನಲ್ಲಿ ಜನ ಸಂಖ್ಯೆಗೆ ಅನುಗುಣವಾಗಿ ಸಮನಾಗಿ ವಾಹನಗಳಿವೆ ಮುಂದಿನ 3 ವರ್ಷದಲ್ಲಿ ಜನರಿಗಿಂತ ವಾಹಗಳೇ ಹೆಚ್ಚಾಗಲಿದೆ. ಇದಕ್ಕೆ ಪೂರಕವಾಗಿ ಮೂಲ ಸೌಕರ್ಯಗಳು ಬೇಕಾಗಿದೆ. ಬೆಂಗಳೂರು ಸಾರಿಗೆಯಲ್ಲಿ ಹೊಸ ಚಿಂತನೆಯ ಅಗತ್ಯವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ…
Date: