ನೌಕರರು ಸಂಸ್ಥೆಯ ಪೂರ್ವಾನುಮತಿ ಇಲ್ಲದೇ ಖಾಸಗಿ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವಂತಿಲ್ಲ ಎಂದು BMTC ಆದೇಶ ಹೊರಡಿಸಿದೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಸಂಸ್ಥೆಯ ಹಲವಾರು ನೌಕರರು ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ, ಖಾಸಗಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿರುತ್ತದೆ ಎಂದಿದ್ದಾರೆ. ನೌಕರರ ಶಿಸ್ತು ಮತ್ತು ನಡತೆಗಳ ನಿಯಮಾವಳಿಗಳು 1971ರ ನಿಯಮ 4(1)ರಂತೆ ಸಂಸ್ಥೆಯ ಯಾರೇ ನೌಕರನು ಸಂಸ್ಥೆಯ ಪೂರ್ವಾನುಮತಿಯನ್ನು ಪಡೆಯದೇ ಯಾವುದೇ ವ್ಯಾಪಾರದಲ್ಲಿ ಅಥವಾ ವ್ಯವಹಾರದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ತೊಡಗತಕ್ಕದಲ್ಲ. ಇತರ ಯಾವುದೇ ಉದ್ಯೋಗ ಮಾಡತಕ್ಕದ್ದಲ್ಲ ಎಂದು ಹೇಳಲಾಗಿದೆ ಎಂದು ತಿಳಿಸಿದ್ದಾರೆ. ಆದ್ದರಿಂದ ಸಂಸ್ಥೆಯ ಯಾವುದೇ ನೌಕರರು ಪೂರ್ವಾನುಮತಿ ಪಡೆಯದೇ ಖಾಸಗಿ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಲ್ಲಿ, ಅಂತಹ ನೌಕರರ ವಿರುದ್ಧ ಶಿಸ್ತು ಮತ್ತು ನಡತೆಗಳ ನಿಯಮಾವಳಿಗಳು 1971ರ ಅನ್ವಯ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ
ಸಂಸ್ಥೆಯ ಪೂರ್ವಾನುಮತಿ ಇಲ್ಲದೇ ಖಾಸಗಿ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವಂತಿಲ್ಲ
Date: