ಬೊಮ್ಮಾಯಿ ಸರ್ಕಾರದ ಒಂದು ವರ್ಷದ ಸಾಧನೆ ಬಗ್ಗೆ ಕುಟುಕಿದ ಸಿದ್ದು.!

Date:

ಬೊಮ್ಮಾಯಿ ಸರ್ಕಾರದ ಒಂದು ವರ್ಷದ ಸಾಧನ ಸಮಾವೇಶದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬಂದು ಮೂರು ವರ್ಷ ಆಗ್ತಾ ಇದೆ. ಜುಲೈ 28ಕ್ಕೆ ಒಂದು ವರ್ಷದ ಸಾಧನಾ ಸಮಾವೇಶ ಮಾಡ್ತಾ ಇದ್ದಾರೆ. ಬೊಮ್ಮಾಯಿ ಸಿಎಂ ಆದಾಗ ಭರವಸೆ ಇತ್ತು.ಜನತಾ ದಳದಿಂದ ಬಂದಿದ್ದಾರೆ.

ವಿಭಿನ್ನವಾಗಿ ಕೆಲಸ ಮಾಡಬಹುದು ಅಂತ. ಆದರೆ ಅವರ ಒಂದು ವರ್ಷದ ಆಡಳಿತ ನೋಡಿ ಭ್ರಮನಿರಸನ ಆಗಿದೆ ಎಂದರು. ಬೊಮ್ಮಾಯಿ‌ ಕಾಲದಲ್ಲಿ ಹಿಂದೆಂದೂ ನಡೆಯದಷ್ಟು ಭ್ರಷ್ಟಾಚಾರ ನಡೆದಿದೆ. 40 % ಕಮಿಷನ್ ಕೊಡಬೇಕಾದದ್ದು ಇತಿಹಾಸದಲ್ಲಿ ಇದೇ ಮೊದಲು. ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪೊಲೀಸರಿಂದ ನ್ಯಾಯ ಸಿಗಲಿಲ್ಲ. ಆತ್ಮಹತ್ಯೆಗೆ ಕಾರಣರಾದವರಿಗೆ ಕ್ಲೀನ್ ಚಿಟ್ ಕೊಟ್ಟಿದ್ದಾರೆ. ನಾವು ನ್ಯಾಯಾಂಗ ತನಿಖೆ ಮಾಡಿ ಅಂದ್ವಿ. ಆದ್ರೆ ಬಿಜೆಪಿ ಸರ್ಕಾರ ಒಪ್ಪಲಿಲ್ಲ. ಕೇಸ್ ಮುಚ್ಚಿ ಹಾಕಲು ಬಿ ರಿಪೋರ್ಟ್ ಹಾಕಿದ್ದು ಎದ್ದು ಕಾಣುತ್ತದೆ. ಈಗ ಇದರ ಸಾಧನೆ ಸಂಭ್ರಮಿಸಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...