No menu items!
12.7 C
Munich
Saturday, May 9, 2026

BR Patil : ಸ್ವಪಕ್ಷದ ವಿರುದ್ಧ ಮತ್ತೆ ಬಾಂಬ್ ಸಿಡಿಸಿದ ಕಾಂಗ್ರೆಸ್ MLA

Must read

BR Patil : ಸ್ವಪಕ್ಷದ ವಿರುದ್ಧ ಮತ್ತೆ ಬಾಂಬ್ ಸಿಡಿಸಿದ ಕಾಂಗ್ರೆಸ್ MLA

ಬೆಂಗಳೂರು: ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಅವರು ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಜೊತೆ ಶಾಸಕ ಬಿಆರ್ ಪಾಟೀಲ್ ಮಾತನಾಡಿರೋ ಆಡಿಯೋ ವೈರಲ್ ಆಗಿದೆ. ಹೌದು ಶಾಸಕ ಬಿಆರ್ ಪಾಟೀಲ್, ಸಚಿವ ಜಮೀರ್ ಖಾನ್ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ, ಸರ್ಕಾರಿ ಮನೆಗಳ ಹಂಚಿಕೆಗೆ ಲಂಚ ಪಡೆಯುತ್ತಿರುವ ಬಗ್ಗೆ ಆರೋಪಿಸಿದ್ದಾರೆ. ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದಿದ್ದಾರೆ.
ಇದಕ್ಕೆ ಪ್ರತಿಯಾಗಿ ಯಾವ ಕ್ಷೇತ್ರದಲ್ಲಿ ಹೀಗೆ ಆಗಿದೆ ಮಾಹಿತಿ ನೀಡಿ. ಕೊಡಲೇ ಕ್ರಮಕೈಗೊಳ್ಳುವುದಾಗಿ ಜಮೀರ್ ಖಾನ್ ಆಪ್ತ ಕಾರ್ಯದರ್ಶಿ ಹೇಳಿದ್ದಾರೆ. ಆಳಂದ ಮತ್ತು ಅಫಜಲಪುರ ಕ್ಷೇತ್ರ ಸೇರಿದಂತೆ ಹಲವೆಡೆ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ವೈರಲ್ ಆಡಿಯೋದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಆಳಂದ ಮತಕ್ಷೇತ್ರದ ಹಲವೆಡೆ ಲಂಚ ಪಡೆದು ಮನೆ ಹಂಚಿಕೆ ಮಾಡಲಾಗಿದೆ. ಅಫಜಲಪುರ ಕ್ಷೇತ್ರದಲ್ಲಿಯೂ ಹಣ ಪಡೆದೇ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಆರ್ ಪಾಟೀಲ್ ಆರೋಪ ಮಾಡಿದ್ದರು.

- Advertisement -spot_img

More articles

- Advertisement -spot_img

Latest article