BRICS ಸಮಾವೇಶದ ಅಧ್ಯಕ್ಷತೆ ಭಾರತಕ್ಕೆ

Date:

ನವದೆಹಲಿ: ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ರಾಷ್ಟ್ರಗಳನ್ನೊಳಗೊಂಡ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತ ಅಧ್ಯಕ್ಷತೆ ವಹಿಸಲಿದೆ ಎಂದು ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ಅನುರಾಗ್ ಶ್ರೀವಾಸ್ತವ್​ ಹೇಳಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಶೆರ್ಪಾಸ್ ಸಭೆಯೊಂದಿಗೆ ಭಾರತ ತನ್ನ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ಅಧ್ಯಕ್ಷತೆಯನ್ನು ಪ್ರಾರಂಭಿಸಲಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅನುರಾಗ್, “ಶೆರ್ಪಾಸ್​ನಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಲಿದೆ. ಇಲ್ಲಿ ಕಾರ್ಯದರ್ಶಿ (ಸಿಪಿವಿ ಮತ್ತು ಒಐಎ) ಸಭೆಯ ಅಧ್ಯಕ್ಷತೆ ವಹಿಸಿ ನಮ್ಮ ವಿಷಯಗಳು, ಆದ್ಯತೆಗಳು ಮತ್ತು # BRICS2021 ಕ್ಯಾಲೆಂಡರ್ ಬಗ್ಗೆ ತಿಳಿಸಲಿದ್ದಾರೆ” ಎಂದರು.

ಮುಂದಿನ ಎರಡು ದಿನಗಳಲ್ಲಿ ನಮ್ಮ ಬ್ರಿಕ್ಸ್ ಪಾಲುದಾರರೊಂದಿಗೆ ಉತ್ಪಾದಕ ಚರ್ಚೆಗಳನ್ನು ಮುಂದುವರಿಸಲು ಭಾರತ ಎದುರು ನೋಡುತ್ತಿದೆ” ಎಂದು ಶ್ರೀವಾಸ್ತವ್​ ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫೆಬ್ರವರಿ 19 ರಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾರತ ಬ್ರಿಕ್ಸ್ 2021 ವೆಬ್‌ಸೈಟ್ ಅನ್ನು ಸುಷ್ಮಾ ಸ್ವರಾಜ್ ಭವನದಲ್ಲಿರುವ ಬ್ರಿಕ್ಸ್ ಸಚಿವಾಲಯದಲ್ಲಿ ಉದ್ಘಾಟಿಸಿದ್ದರು. ಈ ಬಾರಿ ಭಾರತ ಬ್ರಿಕ್ಸ್ ಶೃಂಗಸಭೆ ಆಯೋಜಿಸುವುದಕ್ಕೆ ಚೀನಾವು ಫೆ.22ರಂದು ಬೆಂಬಲ ವ್ಯಕ್ತಪಡಿಸಿತ್ತು. ಐದು ಸದಸ್ಯ ರಾಷ್ಟ್ರಗಳು ಆರ್ಥಿಕ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಭಾರತದ ಜೊತೆ ಪ್ರಬಲ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಚೀನಾ ಹೇಳಿದೆ.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...