ವಿಧಾಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಹೈಡ್ರಾಮ ನಡೆಯುತ್ತಿದೆ. ಹೊಸ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ನಡುವೆ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ…! ಏನಪ್ಪ ಇದು ? ಅಂತ ಶಾಕ್ ಆಗ್ಬೇಡಿ…ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಸಂಸದ ಸ್ಥಾನಕ್ಕೆ.
ಶಾಸಕರಾಗಿ ಪ್ರಮಾಣವನಚ ಸ್ವೀಕರಿಸಿದ ಯಡಿಯೂರಪ್ಪ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿ ಸಂಸದ ಶ್ರೀರಾಮುಲು, ಮಂಡ್ಯ ಸಂಸದ ಸಿ ಎಸ್ ಪುಟ್ಟರಾಜು ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವ ಎಚ್ ಡಿ ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಹುಮತ ಸಾಬೀತಿಗೆ ಕ್ಷಣಗಣನೆ ಆರಂಭವಾಗಿದ್ದು, ಬಿಜೆಪಿ ಪಾಳಯದಲ್ಲಿ ಆತಂಕ ಹೆಚ್ಚಿದೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೈಕಮಾಂಡ್ ಸೂಚಿಸಿದೆ ಎನ್ನಲಾಗುತ್ತಿದೆ. 13 ಪುಟಗಳ ವಿದಾಯ ಭಾಷಣ ಸಿದ್ದಪಡಿಸಿಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಸ್ಪಷ್ಟವಾಗಿಲ್ಲ.