ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು ನೀಡಲಾಗಿದೆ.
ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆ ಮಾಡುವ ವೇಳೆ ಯಡಿಯೂರಪ್ಪ ತಮ್ಮ ಭಾಷಣ ಮಾಡಿದರು. ಈ ವೇಳೆ ರೈತರ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಗೆ ಕರೆ ನೀಡುವುದಾಗಿ ಎಚ್ಚರಿಸಿದ್ದರು. ಆದರೆ ,ಇಂದು ಅವರು ರೈತರೇ ಪ್ರತಿಭಟನೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಬಂದ್ ಗೆ ಕರೆ ನೀಡಿರುವುದು ಅಕ್ರಮ ಎಂದು ವಕೀಲ ಸೂರ್ಯಮುಕುಂದ್ ರಾಜ್ ಡಿಜಿಪಿಗೆ ದೂರು ನೀಡಿದ್ದಾರೆ.
ಈ ಬಂದ್ ಮಾಡಿದಾಗ ಸುಪ್ರೀಂಕೋರ್ಟ್ ಸಾರ್ವಜನಿಕರಿಗೆ ತೊಂದರೆ ನೀಡುವುದು ಅಕ್ರಮ ಎಂದು ತೀರ್ಪು ನೀಡಿತ್ತು. ಕೋರ್ಟ್ ತೀರ್ಪಿನ ವಿರುದ್ಧವಾಗಿ ಬಿಎಸ್ ವೈ ಬಂದ್ ಕರೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.