ಕೇರಳದ ಸಂಸದ ಇ ಅಹಮ್ಮದ್ ಸಾವಿನ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಕೇಂದ್ರ ಬಜೆಟ್ ಮಂಡನೆಯನ್ನು ಇಂದೇ ನಡೆಯಲು ಸರ್ವಪಕ್ಷಗಳು ಒಪ್ಪಿಗೆ ಸೂಚಿಸಿರುವ ಕಾರಣ ಕೇಂದ್ರ ಬಜೆಟ್ ಮಂಡನೆ ಇಂದು ಬೆಳಿಗ್ಗೆಯಿಂದ ಆರಂಭಗೊಳ್ಳಲಿದೆ. ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದರಾಗಿದ್ದ ಇ ಅಹ್ಮದ್ ಸಾವನ್ನಪ್ಪಿದ್ದು ಇದರಿಂದ ಕಲಾಪವನ್ನು ಒಂದು ದಿನ ಮುಂದೂಡಲಾಗಿತ್ತು. ಆದರೆ ಬಜೆಟ್ ಮಂಡನೆಗೆ ಸರ್ವಪಕ್ಷಗಳು ಒಪ್ಪಿಗೆ ಸೂಚಿಸಿರುವ ಕಾರಣ ಇಂದು ಬೆಳಿಗ್ಗೆ 11ರ ಸುಮಾರಿಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಇದೇ ವೇಳೆ ಹಾಲಿ ಸಂಸದ ಅಹ್ಮದ್ ಅವರಿಗೆ ಸಂತಾಪ ಸೂಚಿಸಲಾಗುತ್ತದೆ. ಲೋಕಸಭೆ ಅಥವಾ ರಾಜ್ಯಸಭೆಯ ಹಾಲಿ ಸದಸ್ಯರು ಸಾವನ್ನಪ್ಪಿದ್ದ ಸಂದರ್ಭದಲ್ಲಿ ಕಲಾಪಗಳನ್ನು ಒಂದು ದಿನ ಮುಂದಕ್ಕೆ ಹಾಕುವುದು ವಾಡಿಕೆ. ಆದರೆ ಕಲಾಪದ ದಿನ ಲೋಕಸಭೆ ಅಥವಾ ರಾಜ್ಯ ಸಭೆಯ ಸದಸ್ಯರೊಬ್ಬರು ಸಾವನ್ನಪ್ಪಿರೋದು ಇದೇ ಮೊಟ್ಟ ಮೊದಲು ಎಂದು ತಿಳಿದು ಬಂದಿದೆ. ಸರ್ವಪಕ್ಷಗಳು ಇಂದು ಬಜೆಟ್ ಮಂಡನೆಗೆ ಒಪ್ಪಿಗೆ ಸೂಚಿಸಿರುವ ಕಾರಣದಿಂದಾಗಿ ಇಂದು ಬಜೆಟ್ ಮಂಡನೆಗೊಳ್ಳಲಿದೆ. ಅಲ್ಲದೆ ಬಜೆಟ್ ಮಂಡನೆ ಎನ್ನುವುದು ದೇಶದ ಆರ್ಥಿಕ ವ್ಯವಸ್ಥೆಯ ದೃಷ್ಠಿಯಿಂದ ಪ್ರಮುಖ ಪಾತ್ರ ವಹಿಸುವಂತಹದ್ದು. ಹೀಗಾಗಿ ಬಜೆಟ್ ಮಂಡನೆ ಮುಂದೂಡಲು ಸಾಧ್ಯವಿಲ್ಲ ಎಂಬ ನಿರ್ಧಾರಕ್ಕೆ ಕೇಂದ್ರ ಬಂದಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ
ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಯುವತಿ ಮಾಡಿದ್ದಾದ್ರೂ ಏನು..?
ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನ ಏನ್ಮಾಡ್ತಾರಂತೆ ಗೊತ್ತಾ ಪ್ರಥಮ್..?
ಬಾಗಲಕೋಟೆ ಹುಡುಗರ ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಗೆ ಸಿಕ್ತು ಸಖತ್ ರೆಸ್ಪಾನ್ಸ್..!
2019ರ ವರ್ಲ್ಡ್ ಕಪ್‍ನಲ್ಲಿ ಪಾಕ್ ಆಡೋದು ಬಹುತೇಕ ಡೌಟ್..! ಯಾಕೆ ಗೊತ್ತಾ..?
ಕಂಬಳ ಆಡುವವರಿಗೆ ಮಾನ ಮರ್ಯಾದೆ ಇಲ್ಲ ಎಂದ ಸ್ವಾತಂತ್ರ್ಯ ಹೋರಾಟಗಾರ
ಈ ದೇಶದಲ್ಲಿ 70 ಲೀಟರ್ ಪೆಟ್ರೋಲ್ ಬೆಲೆ ಕೇವಲ 95 ರೂಪಾಯಿ ಮಾತ್ರ..!