No menu items!
24.4 C
Munich
Sunday, July 5, 2026

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಫೆಕ್ಟ್; ನಿಪ್ಪಾಣಿ ತಾಲೂಕಿನ ಮೂರು ಸಂಪರ್ಕ ಸೇತುವೆಗಳು ಜಲಾವೃತ

Must read

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಫೆಕ್ಟ್; ನಿಪ್ಪಾಣಿ ತಾಲೂಕಿನ ಮೂರು ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮೂರು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ.
ದುದಗಂಗಾ ನದಿಯ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಾರದಗಾ–ಬೋಜ್ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಇದರಿಂದ ಎರಡು ಗ್ರಾಮಗಳ ನಡುವಿನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ.
ಅದೇ ರೀತಿ ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬಾರವಾಡ–ಕನ್ನೂರ ಹಾಗೂ ಬೋಜವಾಡಿ–ಗಜವರವಾಡಿ ಸಂಪರ್ಕ ಸೇತುವೆಗಳ ಮೇಲೆಯೂ ಪ್ರವಾಹದ ನೀರು ಹರಿಯುತ್ತಿದ್ದು, ಎರಡೂ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ.
ಇನ್ನೊಂದೆಡೆ, ಮಹಾರಾಷ್ಟ್ರದ ರಾಜಾಪುರ–ಜುಗಳ ಸಂಪರ್ಕ ಸೇತುವೆಯ ಮೇಲೆಯೂ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದ ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ನದಿಗಳಲ್ಲಿ ನೀರಿನ ಹರಿವು ನಿರಂತರವಾಗಿ ಹೆಚ್ಚುತ್ತಿರುವ ಕಾರಣ ಸಾರ್ವಜನಿಕರು ಹಾಗೂ ವಾಹನ ಸವಾರರು ಜಲಾವೃತ ಸೇತುವೆಗಳ ಮೇಲೆ ಸಂಚರಿಸದಂತೆ ಮತ್ತು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

- Advertisement -spot_img

More articles

- Advertisement -spot_img

Latest article