ಶೀಘ್ರದಲ್ಲೆ ಕ್ಯಾಶ್ ವಿತ್‍ಡ್ರಾಗೆ ಬೀಳಲಿದೆ ತೆರಿಗೆ..?

Date:

ದೇಶದಲ್ಲಿ ಕ್ಯಾಶ್‍ಲೆಸ್ ವಹಿವಾಟನ್ನು ಹೆಚ್ಚು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ನಿಯಮವನ್ನು ಜಾರಿಗೆ ತರಲಿದ್ದು, ಅಗತ್ಯಕ್ಕಿಂತ ಹೆಚ್ಚಿನ ಹಣ ಡ್ರಾ ಮಾಡಿಕೊಂಡಿದ್ದೆ ಆದಲ್ಲಿ ಅದರ ಮೇಲೆ ಟ್ಯಾಕ್ಸ್ ಹಾಕೋ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಸುದ್ದಿ ಇದೆ. ಈಗಾಗ್ಲೆ ಕೇಂದ್ರ ಈ ಕುರಿತು ಚಿಂತನೆ ನಡೆಸಿದ್ದು, ಶೀಘ್ರದಲ್ಲೆ ಜಾರಿಗೆ ತರುವ ಸಂಭವವಿದೆ. ಒಂದು ವೇಳೆ ಈ ಪ್ರಸ್ತಾವನೆ ಅನುಮೋದನೆಗೆ ಬಂದ್ರೆ  ಫೆಬ್ರವರಿ 1ರ  ಬಜೆಟ್‍ನಲ್ಲಿ ಇದನ್ನು ಪ್ರಸ್ತಾಪಿಸಲಾಗುತ್ತದೆ. ಕ್ಯಾಶ್‍ಲೆಸ್ ಸಾಧಕ ಭಾಧಕಗಳ ಬಗ್ಗೆ ಕೇಂದ್ರ ಚಿಂತನೆ ನಡೆಸಿದ್ದು ಈ ಮೊದಲು ಯುಪಿಎ ಸರ್ಕಾರದಡಿಯಲ್ಲಿ ಇದ್ದ ಬ್ಯಾಂಕ್ ಟ್ರಾನ್ಸಾಕ್ಷನ್ ಮಾದರಿಯಲ್ಲಿದ್ದರೂ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಇದರ ಅಡಿಯಲ್ಲಿ ನಿಗಧಿತ ಹಣಕ್ಕಿಂತ ಹೆಚ್ಚಿಣ ಹಣ ವಿತ್ ಡ್ರಾ ಮಾಡಿದ್ದಲ್ಲಿ ಅದಕ್ಕೆ ಟ್ಯಾಕ್ಸ್ ಹೊರೆ ಬೀಳಲಿದೆ ಎಂದು ಸೆಂಟ್ರಲ್ ಬ್ಯಾಂಕ್ ಮಾಹಿತಿ ನೀಡಿದೆ. ನಗದು ಹಣದ ವಹಿವಾಟನ್ನು ನಿಲ್ಲಿಸಿ ಡಿಜಿಟಲ್ ವಹಿವಾಟನ್ನು ಪ್ರೋತ್ಸಾಹಿಸುವುದೇ ಇದರ ಮುಖ್ಯ ಉದ್ದೇಶ. ಕಪ್ಪು ಹಣದ ಮೇಲಿನ ವಿಶೇಷ ತನಿಖಾ ದಳ ಈಗಾಗಲೆ 3 ಲಕ್ಷ ರೂ. ಗೂ ಹೆಚ್ಚು ನಗದು ವಹಿವಾಟನ್ನು ನಿಷೇಧಿಸಬೇಕು ಹಾಗೂ ಒಬ್ಬ ವ್ಯಕ್ತಿ 15 ಲಕ್ಷ ರೂ.ಗಿಂತ ಹೆಚ್ಚಿನ ನಗದು ಹೊಂದಿರಬಾರದು ಎಂದು ಶಿಫಾರಸ್ಸು ಮಾಡಿದೆ. ಅಲ್ಲದೆ ಬ್ಯಾಂಕಿಂಗ್ ಕ್ಯಾಶ್ ಟ್ರಾನ್ಸಾಕ್ಷನ್ ಟ್ಯಾಕ್ಸ್ (ಬಿಸಿಟಿಟಿ)ನ್ನು ಮತ್ತೆ ಪರಿಚಯಿಸ್ಬೇಕು ಎಂದು ದಿ ಟ್ಯಾಕ್ಸ್ ಅಡ್ಮಿನಿಸ್ಟ್ರೇಷನ್ ರಿಫಾರ್ಮ್ ಕಮಿಶನ್ (ಟಿಎಆರ್‍ಸಿ) ಶಿಫಾರಸ್ಸು ಮಾಡಿದೆ. ಸೆಂಟ್ರಲ್ ಬ್ಯಾಂಕ್ ಮಾಹಿತಿ ಪ್ರಕಾರ ಕಳೆದ ನವೆಂಬರ್‍ಗೆ ಹೋಲಿಕೆ ಮಾಡಿದ್ರೆ ಡಿಸೆಂಬರ್‍ನಲ್ಲಿ ಡಿಜಿಟಲ್ ವಹಿವಾಟು ಶೇ.43ರಷ್ಟು ಹೆಚ್ಚಿದೆ ಎಂದು ವರದಿಯಾಗಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಬಾಯ್ ಫ್ರೆಂಡ್ ಇದಾರಾ..? ಹಾಗಿದ್ರೆ ಮಾತ್ರ ಕಾಲೇಜ್‍ಗೆ ಬನ್ನಿ..!

ಇರ್‍ರೆಸ್ಪಾನ್ಸಿಬಲ್ ಆಟಕ್ಕೆ ನನ್ ******* ಅಂದ ಪ್ರಥಮ್.!!

ಈ ವರ್ಷದಿಂದ ರಿಮೇಕ್ ಮಾಡಲ್ವಂತೆ ಕಿಚ್ಚ ಸುದೀಪ..?

ಸದ್ಯದಲ್ಲೆ ಬೆಂಗಳೂರಲ್ಲಿ ಪ್ರತ್ಯೇಕ ಸೈಬರ್ ಠಾಣೆ: ಪ್ರವೀಣ್ ಸೂದ್

ಸ್ಯಾಂಡಲ್‍ವುಡ್ ಮಿಸ್ಟರ್ ಪರ್ಫೆಕ್ಟ್ ಅಂತೆ ಈ ನಟ..!

ಖಂಡಿಸುವ ಪ್ರಥಮ್ ನುಡಿದ ಭವಿಷ್ಯ ನಿಜವಾಗುತ್ತಾ??

ಭಾರಿ ಗಿಫ್ಟ್ ನೀಡೋಕೆ ಮುಂದಾಗಿದೆ ಜಿಯೋ..!

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...