No menu items!
5.1 C
Munich
Friday, April 24, 2026

ದೇಶದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಅಸಾಧ್ಯ: ಸುಪ್ರೀಂಕೋರ್ಟ್

Must read

ದೇಶದಲ್ಲಿ ಗೋಹತ್ಯೆ ನಿಷೇಧಿಸಬೇಕೆಂದು ಹಲವು ಸಂಘಪರಿವಾರಗಳು ಹಲವಾರು ವರ್ಷಗಳಿಂದ ಅವಿರತವಾಗಿ ಪ್ರತಿಭಟನೆಗಳು ನಡೆಯುತ್ತಾ ಬಂದಿದ್ದರೂ ಅದಕ್ಕೆ ಯಾವುದೇ ಪ್ರತಿಫಲ ಸಿಕ್ಕಿಲ್ಲ. ಯಾಕಂದ್ರೆ ಗೋಹತ್ಯೆ ಸಂಪೂರ್ಣ ನಿಷೇಧ ಕೋರಿ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ದೇಶದಲ್ಲಿ ಸಂಪೂರ್ಣವಾಗಿ ಗೋಹತ್ಯೆ ನಿಷೇಧ ಸಾಧ್ಯ ಆಗೋದಿಲ್ಲ ಎಂದು ತೀರ್ಪು ನೀಡಿದೆ. ದೇಶದ ಎಲ್ಲಾ ರಾಜ್ಯಗಳಲ್ಲೂ ಗೋಹತ್ಯೆ ನಿಷೇಧವಾಗಬೇಕು ಹಾಗೂ ಗೋಹತ್ಯೆ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಿಐಎಲ್ ಸಲ್ಲಿಸಿದ್ದರೂ ನಿಷೇಧ ಹೇರಲು ಅಸಾಧ್ಯ ಎಂದು ಸಾರ್ವಜನಿಕ ಹಿತಾ ಸಕ್ತಿ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದೆ. ದೇಶದ ಹಲವಾರು ರಾಜ್ಯಗಳಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಹತ್ಯೆಗಳು ನಡೆಯುತ್ತಿವೆ. ಇದರ ಬಗ್ಗೆ ತಿಳಿದಿದ್ದರೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಆದ್ದರಿಂದ ದೇಶದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಹೇರಬೇಕೆಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಒಂದು ಅರ್ಜಿಯ ಮೂಲಕ ದೇಶದ ಎಲ್ಲಾ ರಾಜ್ಯಗಳಿಗೂ ಆದೇಶ ನೀಡಲು ಸಾಧ್ಯವಿಲ್ಲ. ರಾಜ್ಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗೋಹತ್ಯೆ ನಡೆಯುತ್ತಿವೆ ಎನ್ನುವುದಾದರೆ ಆ ರಾಜ್ಯಗಳು ಅಕ್ರಮ ಗೋ ಸಾಗಾಟದ ಬಗ್ಗೆ ಎಚ್ಚರ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳಿಗೂ ಆದೇಶ ನೀಡಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ನಕಲಿ ಅಪ್ಪ-ಅಮ್ಮನಿಂದ ಬ್ಲ್ಯಾಕ್‍ಮೇಲ್: ನಟ ಧನುಷ್ ಆರೋಪ

ಈ ದೇಶದಲ್ಲಿ 70 ಲೀಟರ್ ಪೆಟ್ರೋಲ್ ಬೆಲೆ ಕೇವಲ 95 ರೂಪಾಯಿ ಮಾತ್ರ..!

ಅಧ್ಯಕ್ಷ ಸ್ಥಾನ ಏರಿದ ನಂತರ ಮೋದಿಗೆ ಆಹ್ವಾನ ನೀಡಿದ ಟ್ರಂಪ್

ಕಂಬಳದ ಪರವಾಗಿ ಬೆಂಬಲಿಸ್ತೀರಾ..? ನಿಮ್ಮ ಅಭಿಪ್ರಾಯ ತಿಳಿಸಿ

ನವಜಾತ ಶಿಶುವಿಗಿದೆ ನಾಲ್ಕು ಕಾಲು, ಎರಡು ಜನನನಾಂಗ..!

ರಾತ್ರೋ ರಾತ್ರಿ ಎಲಿಮಿನೇಟ್ ಆದ್ರು ಶಾಲಿನಿ..!!

ಹಂಪಿ ಸನ್‍ಲೈಟ್ & ಶ್ಯಾಡೋಸ್ ಚಿತ್ರಪ್ರದರ್ಶನ

ಈ ಬಾರಿಯ ಬಿಗ್‍ಬಾಸ್ ಫೈನಲ್ ಗೆಸ್ಟ್ ಯಾರು ಗೊತ್ತಾ..?

Comments

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article