No menu items!
14.7 C
Munich
Thursday, July 23, 2026

ನಾಳೆಯಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ

Must read

ನಾಳೆಯಿಂದ ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಮೂರು ದಿನಗಳ ಸಿಇಟಿ ಪರೀಕ್ಷೆ ನಡೆಯಲಿದೆ ಎಂದರು.
ನಾಳೆ ಅಂದರೆ ಜೂನ್‌ 16ರಂದು ಬೆಳಿಗ್ಗೆ 10.30ಕ್ಕೆ ಜೀವಶಾಸ್ತ್ರ ಪರೀಕ್ಷೆ, ಮಧ್ಯಾಹ್ನ 2.30ಕ್ಕೆ ಗಣಿತ, 17ರಂದು ಬೆಳಿಗ್ಗೆ 10.30ಕ್ಕೆ ಭೌತಶಾಸ್ತ್ರ, ಮಧ್ಯಾಹ್ನ 2.30ಕ್ಕೆ ರಸಾಯನ ಶಾಸ್ತ್ರ, 18ರಂದು 11.30ಕ್ಕೆ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿವೆ.

 


ರಾಜ್ಯದ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟಾರೆ 2,16,526 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 87 ಪರೀಕ್ಷಾ ಕೇಂದ್ರಗಳು ಇದ್ದರೆ, ವಿವಿಧ ಜಿಲ್ಲೆಗಳಲ್ಲಿ 399 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ 6 ಕೇಂದ್ರಗಳಲ್ಲಿ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಅಶ್ವತ್ಥ ನಾರಾಯಣ  ವಿವರಿಸಿದರು.

 

ಈ ಬಗ್ಗೆ ಮಾತನಾಡಿದ ಅವರು ” ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸೂಸೂತ್ರವಾಗಿ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ” ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article