No menu items!
15 C
Munich
Saturday, June 13, 2026

ನೀಟ್ ಪರೀಕ್ಷೆ ನಡೆಸುವುದನ್ನು ನಿಲ್ಲಿಸಿ, ರಾಜ್ಯಗಳಿಗೆ ಅಧಿಕಾರ ನೀಡಿ: ಸಿಎಂ ಸಿದ್ದರಾಮಯ್ಯ ಆಗ್ರಹ

Must read

ನೀಟ್ ಪರೀಕ್ಷೆ ನಡೆಸುವುದನ್ನು ನಿಲ್ಲಿಸಿ, ರಾಜ್ಯಗಳಿಗೆ ಅಧಿಕಾರ ನೀಡಿ: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ನೀಟ್ (NEET) ಪರೀಕ್ಷೆಯನ್ನು ಕೇಂದ್ರ ಸರ್ಕಾರ ನಡೆಸುವುದನ್ನು ನಿಲ್ಲಿಸಿ, ಆಯಾ ರಾಜ್ಯಗಳಿಗೆ ಪರೀಕ್ಷಾ ವ್ಯವಸ್ಥೆ ಜಾರಿಗೊಳಿಸುವ ಅಧಿಕಾರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಅಕ್ರಮಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜವಾಬ್ದಾರರು. ಆದರೆ ಅವರು ಅಥವಾ ಪ್ರಧಾನಿ ನರೇಂದ್ರ ಮೋದಿ ಇದುವರೆಗೆ ಹೊಣೆ ಹೊತ್ತಿಲ್ಲ” ಎಂದು ಆರೋಪಿಸಿದರು.
“ಪ್ರಶ್ನೆಪತ್ರಿಕೆ ಸೋರಿಕೆಯಾದ ಬಳಿಕ ಮತ್ತೊಂದು ದಿನ ಪರೀಕ್ಷೆ ನಡೆಸುವುದಾಗಿ ಹೇಳಿ ಕೈತೊಳೆದುಕೊಳ್ಳುವ ಕೆಲಸ ಮಾಡಲಾಗಿದೆ. ಇದಕ್ಕೆ ಪ್ರಧಾನಿ ಮೋದಿ ಮತ್ತು ಧರ್ಮೇಂದ್ರ ಪ್ರಧಾನ್ ಇಬ್ಬರೂ ಉತ್ತರ ನೀಡಬೇಕು. ಕೂಡಲೇ ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದರು.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಸಿಇಟಿ ಮೂಲಕ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಇತ್ತು. ಆದರೆ 2016ರಲ್ಲಿ ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ಜಾರಿಗೆ ತಂದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಸಿಎಂ ಟೀಕಿಸಿದರು.
“ಇಲ್ಲಿವರೆಗೆ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ವಿದ್ಯಾರ್ಥಿಗಳು ಒಂದು ವರ್ಷ ಕಾಲ ಕಠಿಣ ಪರಿಶ್ರಮಪಟ್ಟು ತಯಾರಿ ಮಾಡಿಕೊಳ್ಳುತ್ತಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಕೋಚಿಂಗ್ ಸೆಂಟರ್ಗಳಿಗೆ ಸೇರುತ್ತಾರೆ. ಆದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅದೇ ಅವಕಾಶ ಸಿಗುವುದಿಲ್ಲ. ಇದು ಕೇಂದ್ರ ಸರ್ಕಾರದ ಅವಧಿಯಲ್ಲಿ ನಡೆಯುತ್ತಿರುವ ಅಸಮಾನತೆ” ಎಂದು ಆರೋಪಿಸಿದರು.

- Advertisement -spot_img

More articles

- Advertisement -spot_img

Latest article