ವಿದ್ಯಾರ್ಥಿಯ‌ ಕಣ್ಣಿನ ದೃಷ್ಟಿಯನ್ನೇ ತೆಗೆದ ಶಿಕ್ಷಕ…?

Date:

ವಿದ್ಯಾರ್ಥಿಯ ಕಣ್ಣಿ‌ನ ದೃಷ್ಟಿ ತೆಗೆದ ಆರೋಪ ಚಾಮರಾಜನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಯುಸೇಫ್ ವಿರುದ್ಧ ಕೇಳಿಬಂದಿದೆ.
ಯುಸೇಫ್ ಗಿರಿ ಮಲ್ಲೇಶ್ ಎಂಬ ವಿದ್ಯಾರ್ಥಿಗರ ಸ್ಕೇಳಿನಿಂದ ಹೊಡೆದಿದ್ದಾರೆ. ಈ ವೇಳೆ ಆತನ ಎಡಗಣ್ಣಿಗೆ ಸ್ಕೇಲ್ ತಾಕಿ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.


ಜನವರಿಯಲ್ಲಿ ಗಿರಿಮಲ್ಲೇಶ್ ಗಲಾಟೆ ಮಾಡುತ್ತಿದ್ದ ಎಂದು ಶಿಕ್ಷಕ ಸ್ಕೇಲ್ ನಿಂದ ಹೊಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಕಣ್ಣಿಗೆ ಸ್ಕೇಲ್ ತಾಗಿದೆ. ಬಳಿಕ ತನಗೇನು ನೋವಾಗಿಲ್ಲ ಎಂದು ಗಿರಿಮಲ್ಲೇಶ್ ಸುಮ್ಮನಿದ್ದಾನೆ.ಈಗ ಆತನಿಗೆ ನೋವು ಕಾಣಿಸಿಕೊಂಡಿದೆ. ತಂದೆ ಸೋಮೇಶ್ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದು, ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ದೃಷ್ಟಿ ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...