ಮಳೆಯಿಂದ ತತ್ತರಿಸಿರುವ ಕೊಡಗು ಸಂತ್ರಸ್ತರ ನೆರವಿಗೆ ಧಾವಿಸುವಂತೆ ಕನ್ನಡ ರ್ಯಾಪರ್, ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಮನವಿ ಮಾಡಿದ್ದಾರೆ.
ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಗಳಿಗೆ ಸಹಾಯ ಮಾಡೋಣ ಎಂದು ಚಂದನ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಕೊಡಗು ಹಿಂದೆಂದೂ ಕಂಡು ಕೇಳರಿಯದ ಪ್ರವಾಹದಿಂದ ನಲುಗಿದೆ. ಅವರಿಗೆ ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಕರೆ ನೀಡಿದರು.

ತಾನು ಕೂಡ ತನ್ನಿಂದಾದ ಸಹಾಯ ಮಾಡುವುದಾಗಿ ಹೇಳಿದರು. ನಾಳೆ ಅಗತ್ಯ ಸಾಮಗ್ರಿಗಳನ್ನು ಸಂತ್ರಸ್ತರಿಗೆ ತಲುಪಿಸುವ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.






