ಮಳವಳ್ಳಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಚಾರ್ಜ್ ಶೀಟ್ ಸಲ್ಲಿಕೆ

admin
1 Min Read

ಮಳವಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣ ಸಂಬಂಧ 2 ವಾರದಲ್ಲಿ ಮಳವಳ್ಳಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಕ್ಟೋಬರ್ 11ರಂದು ಮಳವಳ್ಳಿ ಪಟ್ಟಣದಲ್ಲಿ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಮಳವಳ್ಳಿ DySP ನವೀನ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಘಟನೆ ನಡೆದ‌‌ 2 ವಾರದಲ್ಲಿ ಆರೋಪಿ ಕಾಂತರಾಜು ವಿರುದ್ಧ ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಮಂಡ್ಯ SP N.ಯತೀಶ್, ಪಾರದರ್ಶಕ ಮತ್ತು ವೈಜ್ಞಾನಿಕವಾಗಿ ಪ್ರಕರಣದ ತನಿಖೆ ನಡೆಸಲಾಗಿದೆ. ಎಲ್ಲಾ ಸಾಕ್ಷಿಗಳನ್ನ‌ ಸಂಗ್ರಹಿಸಿ, ವಿವರವಾದ ಚಾರ್ಜ್ ಶೀಟ್ ಸಲ್ಲಿಸಿದ್ದೇವೆ. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಮಂಡ್ಯ SP N.ಯತೀಶ್ ತಿಳಿಸಿದ್ರು..

Share This Article
Leave a Comment