ಸಕ್ಕರೆ ನಗರಿ ಮಂಡ್ಯದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

0
733

ಸಕ್ಕರೆ ನಗರಿ ಮಂಡ್ಯದಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕವನ್ನ ಸೃಷ್ಟಿಸುತ್ತಿವೆ.

ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲಿನಲ್ಲಿ ತಡರಾತ್ರಿ ಚಿರತೆ ಸಂಚಾರ ನಡೆಸಿದೆ.

ಗ್ರಾಮದಲ್ಲಿ ಚಿರತೆ ಸಂಚಾರ ನಡೆಸಿರುವ ದೃಶ್ಯ ಶಿವರಾಮ್ ಎಂಬುವರ ಮನೆ CCTVಯಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಆದಷ್ಟು ಬೇಗ ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.