No menu items!
11.1 C
Munich
Wednesday, April 29, 2026

ವಾಟರ್ ಫಿಲ್ಟರ್ ಹೌಸ್ನಲ್ಲಿ ಕ್ಲೋರಿನ್ ಅನಿಲ ಸೋರಿಕೆ

Must read

ಟಿ.ನರಸೀಪುರ ಪಟ್ಟಣದ ವಾಟರ್ ಫಿಲ್ಟರ್ ಹೌಸ್ನಲ್ಲಿ ಅಲ್ಪ ಪ್ರಮಾಣದ ಕ್ಲೋರಿನ್ ಅನಿಲ ಸೋರಿಕೆ ಉಂಟಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ನಾಗರಿಕರು ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಪಟ್ಟಣದ ಜೋಡಿ ರಸ್ತೆಯ PWD ವಸತಿ ಗೃಹದ ಬಳಿಯ ನೀರು ಶುದ್ದೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಸೋರಿಕೆಯಾಗಿದೆ.

ಈ ಕೂಡಲೇ ಎಚ್ಚೆತ್ತ ಪುರಸಭೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಂಜಿನಿಯರ್ಗಳು, ಪೊಲೀಸ್ ಇಲಾಖೆ ಹಾಗೂ ಅಗ್ನಿ ಶಾಮಕ ಇಲಾಖೆಯವರು ಶುದ್ದೀಕರಣ ಘಟಕಕ್ಕೆ ಯಾರೂ ಹೋಗದಂತೆ ಎಚ್ಚರ ವಹಿಸಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ನಿವಾಸಿಗಳು ಬೇರೆಡೆಗೆ ಸ್ಥಳಾಂತರ ಮಾಡಿದ್ದಾರೆ. ಕಳೆದ ಬಾರಿಯೂ ಇದೇ ರೀತಿ ಅನಿಲ ಸೋರಿಕೆ ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಅದೇ ಸ್ಥಳದಲ್ಲಿ ಅನಿಲ ಸೋರಿಕೆಯಾಗಿದೆ. ಆದ್ರೆ, ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿ ಕಾರ್ಯಚರಣೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article