ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ
ಕಾಮಿಡಿ ಕಿಲಾಡಿಗಳು ಸೀಸನ್ 3ರಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಸಿನಿಮಾಗಳಲ್ಲಿ ಉತ್ತಮ ಅವಕಾಶಗಳನ್ನು ಪಡೆಯುತ್ತಿದ್ದ 33 ವರ್ಷದ ರಾಕೇಶ್ಗೆ ತಾಯಿ ಹಾಗೂ ಸಹೋದರಿಯ ಇದ್ದು ಮನೆಗೆ ಆಧಾರಸ್ತಂಭ ಆಗಿದ್ದರು. ಇಡೀ ಮನೆಯ ಜವಾಬ್ದಾರಿ ರಾಕೇಶ್ ಮೇಲಿತ್ತು. ಸದ್ಯ ರಾಕೇಶ್ ಸಾವಿನ ಸುದ್ದಿ ತಿಳಿದು ಕಾಮಿಡಿ ಕಲಾವಿದರ ತಂಡ ಕಂಬನಿ ಮಿಡಿಯುತ್ತಿದೆ. ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.