ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅನ್ವರ್ (40) ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ನಗರದ ಉಪ್ಪಳ್ಳಿ ಬಡಾವಣೆಯಲ್ಲಿ ವಾಸವಿದ್ದ ಅನ್ವರ್ ಗೌರಿ ಬಡಾವಣೆಯ ರಸ್ತೆಯಲ್ಲಿ ನಿನ್ನೆ ರಾತ್ರಿ 9.30ರ ಸುಮಾರಿಗೆ ಕಾರಿನಲ್ಲಿ ತೆರಳುವಾಗ ಇಬ್ಬರು ಅಪರಿಚಿತರು ದ್ವಿಚಕ್ರವಾಹನದಲ್ಲಿ ಹಿಂಬಾಲಿಸಿ ಕಾರನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಗಾಯಗೊಂಡಿದ್ದ ಅನ್ವರ್ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆ
Date: