CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

Date:

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

ಬೆಂಗಳೂರು: ರಾಜ್ಯದ ಶಾಲೆಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಬಾಂಬ್ ಬೆದರಿಕೆ ಬರುತ್ತಿರುವ ನಡುವೆಯೇ, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಗಳನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಹುಸಿ ಬೆದರಿಕೆ ಸಂದೇಶ ಬಂದಿದೆ.

ಈ ಇಮೇಲ್‌ನಲ್ಲಿ, ಸಿಎಂ ಮತ್ತು ಡಿಸಿಎಂ ನಿವಾಸಗಳಲ್ಲಿ ಆರು ಆರ್‌ಡಿಎಕ್ಸ್ ಬಾಂಬ್‌ಗಳು ಫಿಕ್ಸ್ ಮಾಡಲಾಗಿದೆ ಎಂದು ತಿಳಿಸಲಾಗಿದ್ದು, ರಿಮೋಟ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆಯ ಉದ್ದೇಶ ವ್ಯಕ್ತಪಡಿಸಲಾಗಿದೆ. ಈ ಮೂಲಕ ರಾಜ್ಯದ ಬಾಂಬ್ ಬೆದರಿಕೆ ಪ್ರಕರಣಗಳು ಮತ್ತೊಂದು ಹಂತ ತಲುಪಿವೆ.

ಇದೊಂದು ಹುಸಿ ಬೆದರಿಕೆಯಾಗಿರುವ ಅನುಮಾನ ವ್ಯಕ್ತವಾಗಿದ್ದು, ತಕ್ಷಣ ಬಾಂಬ್ ನಿಗ್ರಹ ದಳ ಉಭಯ ನಾಯಕರ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಯಾವುದೇ ಸ್ಪೋಟಕ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಸುಳ್ಳು ಬೆದರಿಕೆಯಾಗಿರುವುದು ದೃಢಪಟ್ಟಿದೆ.

ಈ ಬೆದರಿಕೆ ಸಂದೇಶವು aarna.ashwinshekher@outlook.com ಎಂಬ ಇ-ಮೇಲ್ ಐಡಿಯಿಂದ ಕಳಿಸಲಾಗಿದ್ದು, ತಮಿಳುನಾಡಿನ ವ್ಯಕ್ತಿಯೋರ್ವನಿಂದ ಕಳುಹಿಸಿರುವ ಸಾಧ್ಯತೆ. ಇಮೇಲ್ ಕಳಿಸಿರುವ ಶಂಕಿತನ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...