No menu items!
25.3 C
Munich
Monday, September 7, 2026

ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ ಮತ್ತು ಹೆಮ್ಮೆ: ಸಿಎಂ ಡಿ.ಕೆ. ಶಿವಕುಮಾರ್

Must read

ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ ಮತ್ತು ಹೆಮ್ಮೆ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಜು. 26: ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಬೆಂಗಳೂರಿನ ನೆಹರೂ ತಾರಾಲಯದಲ್ಲಿರುವ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, “ನಮ್ಮ ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ ಮತ್ತು ಹೆಮ್ಮೆ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ 527 ಯೋಧರಿಗೆ, ಅದರಲ್ಲೂ ಕರ್ನಾಟಕದ 13 ವೀರ ಯೋಧರಿಗೆ ಹೃತ್ಪೂರ್ವಕ ನಮನ ಸಲ್ಲಿಸುತ್ತೇನೆ” ಎಂದರು.
ಭಾರತೀಯ ಯೋಧರು ದೇಶದ ಗಡಿಯನ್ನು ಕಾಪಾಡಲು ಪ್ರತಿಕ್ಷಣವೂ ಸನ್ನದ್ಧರಾಗಿದ್ದು, ಅವರ ತ್ಯಾಗದಿಂದಲೇ ದೇಶದ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದು ಹೇಳಿದರು.
ಭಾರತದ ರಕ್ಷಣಾ ವಲಯಕ್ಕೆ ಕರ್ನಾಟಕ ಮಹತ್ವದ ಕೊಡುಗೆ ನೀಡುತ್ತಿದ್ದು, ಬೆಮೆಲ್, ಡಿಆರ್‌ಡಿಒ, ಇಸ್ರೋ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ರಾಜ್ಯದಲ್ಲಿವೆ. ಭಾರತದ ಮೊದಲ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಅವರ ಸೇವೆಯನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು.
ಯೋಧರು, ಯುವಕರು, ಮಹಿಳೆಯರು, ರೈತರು ಹಾಗೂ ತೆರಿಗೆದಾರರು ದೇಶದ ಶಕ್ತಿಯಾಗಿದ್ದು, ಎಲ್ಲರೂ ಒಂದಾಗಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ ನೆಲೆಸಿರುವ ಯೋಧರ ಕುಟುಂಬಗಳ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಅವರ ಸಲಹೆಗಳನ್ನು ಸರ್ಕಾರ ಮುಕ್ತ ಮನಸ್ಸಿನಿಂದ ಸ್ವೀಕರಿಸಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

- Advertisement -spot_img

More articles

- Advertisement -spot_img

Latest article