ನ್ಯಾಯಾಲಯದ ಕಣ್ತಪ್ಪಿಸಿತ್ತಿರುವ ಸಿದ್ದರಾಮಯ್ಯ

Date:

ಮೈಸೂರು:- CM ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಮುಡಾ ಹಗರಣದ ಸಂಬಂಧ ರಿಟ್ ಅರ್ಜಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಹೇಳಿದ್ದಾರೆ.

ಪತ್ನಿ ಪಾರ್ವತಿ ಮುಡಾಗೆ ಪತ್ರ ಬರೆದಿರುವುದು ಸಿದ್ದರಾಮಯ್ಯ ಅವರಿಗೆ ಮೊದಲೇ ಗೊತ್ತಿತ್ತು. ಸಿದ್ದರಾಮಯ್ಯ ಒಟ್ಟು 713 ಪುಟಗಳ ದಾಖಲೆ ಒಳಗೊಂಡ ರಿಟ್ ಅರ್ಜಿ ಹಾಕಿದ್ದಾರೆ. 531ನೇ ಪುಟವಾಗಿ ಪಾರ್ವತಿ ಬರೆದ ಅರ್ಜಿಯ ಮೊದಲ ಪುಟ ಇದೆ. ಆದರೆ‌ 532ನೇ ಪುಟದಲ್ಲಿ ಪಾರ್ವತಿ ಅವರು ಬರೆದ ಪತ್ರದ ಎರಡನೇ ಪುಟ ಇಲ್ಲ ಎಂದು ಅವರು ದೂರಿದ್ದಾರೆ.

ಅದರಲ್ಲಿಯೂ ಎರಡನೇ ಪುಟಕ್ಕೆ ವೈಟ್ನರ್ ಹಾಕಿ ಸಾಲೊಂದನ್ನು ಅಳಿಸಲಾಗಿದೆ. 532ನೇ ಪುಟದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ನಡಾವಳಿ ಪತ್ರ ಇದೆ. ವೈಟ್ನರ್ ಹಾಕಿ ಅಳಿಸಿರುವ ಕಾರಣಕ್ಕಾಗಿ ಎರಡನೇ ಪುಟ ಬಿಟ್ಟು ಕೇವಲ ಒಂದು ಪುಟ ಮಾತ್ರ ಕೋರ್ಟ್‌ಗೆ ಕೊಟ್ಟಿದ್ದಾರೆ. ಆ ಮೂಲಕ ರಾಜ್ಯ ಜನರಿಗೆ ಹಾಗೂ ಕೋರ್ಟ್‌ಗೆ ಸತ್ಯ ಮುಚ್ಚಿಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಇದೇ ವಿಚಾರದಲ್ಲಿ ‌ರಾಜ್ಯಪಾಲರಿಗೆ ಬರೆದಿರುವ ಶೋಕಾಸ್ ನೋಟಿಸ್​​ನಲ್ಲೂ ಸಿಎಂ ಉಲ್ಲೇಖಿಸಿದ್ದಾರೆ. ಶೋಕಾಸ್ ನೋಟಿಸ್ ಉತ್ತರದ 30 ನೇ ಪುಟದಲ್ಲಿ ತಮ್ಮ ಪತ್ನಿ ಪತ್ರ ಬರೆದ ಮಾಹಿತಿ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಕ್ಕೆ ಸತ್ಯ ಮುಚ್ಚಿಟ್ಟಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ. 29 ರಂದು ವಿಚಾರಣೆಯ ಸಂದರ್ಭದಲ್ಲಿ ಎಲ್ಲಾ ವಿಚಾರವನ್ನು ನ್ಯಾಯಾಲದ ಗಮನಕ್ಕೆ ತರುತ್ತೇವೆ. ಸಿಎಂ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು‌ ಮಾಡುವಂತೆ ಮನವಿ ಮಾಡುತ್ತೇವೆ ಎಂದು ಸ್ನೇಹಮಹಿ‌ಕೃಷ್ಣ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...