ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ MLC ಗೋವಿಂದರಾಜು ವಜಾ!
ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಎಂಎಲ್ಸಿ ಗೋವಿಂದರಾಜುಗೆ ಕೋಕ್ ನೀಡಲಾಗಿದೆ.
ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜನೆಗೆ ಸಿಎಂ ಮೇಲೆ ಒತ್ತಡ ಹೇರಿದ್ದ ಗೋವಿಂದರಾಜು ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೋಕ್ ನೀಡಲಾಗಿದೆ. ಗೋವಿಂದರಾಜು ಅವರು ಸದ್ಯ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದಾರೆ.
ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೂಲಕ ಕಾರ್ಯಕ್ರಮ ಆಯೋಜನೆ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ಸರ್ಕಾರ, ಗೋವಿಂದರಾಜು ಒತ್ತಡದಿಂದಲೇ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ಗೋವಿಂದರಾಜು ವಿರುದ್ದ ಸಿಎಂ ಆಪ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತೆರವುಗೊಳಿಸಿ ಆದೇಶಿಸಿದ್ದಾರೆ.