ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿಗೆ ನಾಚಿಕೆ ಆಗ್ಬೇಕು: ಬೇಳೂರು ಗೋಪಾಲಕೃಷ್ಣ!

Date:

ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿಗೆ ನಾಚಿಕೆ ಆಗ್ಬೇಕು: ಬೇಳೂರು ಗೋಪಾಲಕೃಷ್ಣ!

ಬೆಂಗಳೂರು:- ಸಿಎಂ, ಡಿಸಿಎಂ ರಾಜೀನಾಮೆಗೆ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿ ಅವರಿಗೆ ನಾಚಿಕೆ ಆಗಬೇಕು. ಡಾ. ರಾಜ್‌ಕುಮಾರ್‌ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರಲ್ಲ, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ ಅಂತ ಪ್ರಶ್ನಿಸಿದರು.

ಡಾ. ರಾಜ್‌ಕುಮಾರ್ ತೀರಿಕೊಂಡಾಗ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು.‌ ಕಂಠೀರವ ಸ್ಟುಡಿಯೋದಲ್ಲಿ ಆಗ ನಾನೂ ಇದ್ದೆ. ಆಗ ಕುಮಾರಸ್ವಾಮಿ ರಾಜೀನಾಮೆ ನೀಡಿದ್ರಾ..? ಹಾವೇರಿಯಲ್ಲಿ ರೈತರ ಮೇಲೆ ಬಿಎಸ್‌ವೈ ಗೋಲಿಬಾರ್ ಮಾಡಿಸಿದ್ರು, ರಾಜೀನಾಮೆ ನೀಡಿದ್ರಾ..? ಪಹಲ್ಗಾಮ್ ಉಗ್ರರ ದಾಳಿಯಲ್ಲಿ 26 ಮಂದಿ ಸತ್ರು, ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಆಗಿ ಹಲವರು ಸತ್ರು. ಪ್ರಧಾನಿ ಮೋದಿ , ಅಮಿತ್ ಶಾ ರಾಜೀನಾಮೆ ನೀಡಿದ್ರಾ..? ಮೋದಿ, ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಅಂತ ಹೇಳಿದ್ದಾರೆ.

ಇಂತಹ ಘಟನೆ ಆಗಬಾರದಿತ್ತು, ಆದ್ರೆ ಆಗಿಹೋಗಿದೆ. ಅದಕ್ಕೆ ಪೊಲೀಸ್ ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಯ ನೇಮಕ ಹಿಂಪಡೆಯಲಾಗಿದೆ. ಸಿಎಂ, ಡಿಸಿಎಂ ಇಬ್ರೂ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. ಇವೆಲ್ಲ ಆಕಸ್ಮಿಕ ಘಟನೆ, ನಾವೂ ಕೂಡ ನೋವಲ್ಲಿ ಇದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...