No menu items!
19.8 C
Munich
Friday, April 17, 2026

ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು

Must read

ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ. ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಈ ಬಗ್ಗೆ ಇಂದು ಸಭೆ ನಡೆಸಲಾಗುವುದು. ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಇನ್ನೂ ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಮಂಕಿಪಾಕ್ಸ್ ಸೋಂಕು ನಿಯಂತ್ರಣದ ಬಗ್ಗೆಯೂ ಸಭೆ ನಡೆಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article