ಟ್ರಂಪ್ ಬಳಿ ಅಚ್ಚೇದಿನ ಪಡೆಯುವ ಪರಿಸ್ಥಿತಿ ನಮ್ಮ ದೇಶಕ್ಕೆ ಬಂದಿದೆ: ಸಿಎಂ ಇಬ್ರಾಹಿಂ!
ರಾಮನಗರ: ಟ್ರಂಪ್ ಬಳಿ ಅಚ್ಚೇದಿನ ಪಡೆಯುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ.ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಇಂದಿರಾಗಾಂಧಿ 93 ಸಾವಿರ ಬಾಂಗ್ಲಾ ಸೈನಿಕರ ಸೆರೆಹಿಡಿದಿದ್ದರು. ವಾಜಪೇಯಿ ನಮ್ಮ ದೇಶದ ವಿಚಾರಕ್ಕೆ ಮೂರನೇ ವ್ಯಕ್ತಿಗಳ ಪ್ರವೇಶ ಬೇಡ ಅಂದಿದ್ದರು. ಆದರೆ ಮೋದಿಗೆ ಇಚ್ಛಾಶಕ್ತಿಯ ಕೊರತೆ ಇದೆ. ಮೊದಲು ಇತಿಹಾಸ ನೋಡಿಕೊಂಡು ಬರಲಿ. ಟ್ರಂಪ್ ಬಳಿ ಅಚ್ಚೇದಿನ ಪಡೆಯುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ದೇಶದ ಸೈನಿಕರಿಂದಲೇ ಈ ದೇಶ ಉಳಿದಿದೆ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯತೆ ಎದ್ದು ಕಾಣಿಸುತ್ತಿದೆ. ಯುದ್ಧ ಆರಂಭವಾದಾಗ ಇಡೀ ದೇಶದ ಜನ ಮೋದಿಗೆ ಸಂಪೂರ್ಣ ಬೆಂಬಲ ಕೊಟ್ಟರು. ಆದರೆ ಇದ್ದಕ್ಕಿದ್ದಂತೆ ಟ್ರಂಪ್ ಹೇಳಿದ ಎಂದು ಯುದ್ಧ ನಿಲ್ಲಿಸಿದರು. ಟ್ರಂಪ್ ಯಾರು? ನಮ್ಮ ದೊಡ್ಡಪ್ಪನಾ, ಚಿಕ್ಕಪ್ಪನಾ? ನಮ್ಮ ದೇಶದ ವಿಚಾರಕ್ಕೆ ಕೈ ಹಾಕುವ ಟ್ರಂಪ್ ಯಾರು? ಟ್ರಂಪ್ ಹೇಳಿದ ಅಂತ ನಿಲ್ಲಿಸಲು ಇವರು ಯಾರು ಎಂದು ಪ್ರಶ್ನಿಸಿದರು.