ಬೆಂಗಳೂರು : ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯವ್ಯಯ ಅನುಷ್ಠಾನ ಕುರಿತು ಪರಿಶೀಲನೆ ಸಭೆ ನಡೆಸಿದರು. ಸಭೆಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧ ಪಟ್ಟ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಸಂಬಂಧ ಪಟ್ಟ ಅಧಿಕಾರಿಗಳ ಸಲಹೆ ಸೂಚನೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆಯುಕ್ತ ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಅರುಂಧತಿ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯವ್ಯಯ ಅನುಷ್ಠಾನ ಕುರಿತು ಪರಿಶೀಲನೆ
Date: