No menu items!
17.4 C
Munich
Friday, August 21, 2026

ಹೈಕಮಾಂಡ್ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರಯಾಣ? ಕಾಂಗ್ರೆಸ್ ವಲಯದಲ್ಲಿ ಹೆಚ್ಚಿದ ಕುತೂಹಲ

Must read

ಹೈಕಮಾಂಡ್ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರಯಾಣ? ಕಾಂಗ್ರೆಸ್ ವಲಯದಲ್ಲಿ ಹೆಚ್ಚಿದ ಕುತೂಹಲ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಗೆ ತಲುಪಿಸಿದ್ದಾರೆ. ಇದರ ಬೆನ್ನಲ್ಲೇ ಅವರು ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಸಿದ್ದರಾಮಯ್ಯ ಅವರು ಇಂದು ಸಂಜೆಯೇ ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಎಐಸಿಸಿ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸುವುದು ಈ ಪ್ರವಾಸದ ಪ್ರಮುಖ ಉದ್ದೇಶ ಎಂದು ತಿಳಿದುಬಂದಿದೆ. ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಹೈಕಮಾಂಡ್ಗೆ ಧನ್ಯವಾದ ತಿಳಿಸಲಿದ್ದಾರೆ ಎನ್ನಲಾಗಿದೆ.
ಇದೀಗ ಕಾಂಗ್ರೆಸ್ ವಲಯದಲ್ಲಿ ಶಾಸಕಾಂಗ ಪಕ್ಷದ ಸಭೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆ ಮುಂದುವರಿದಿದೆ. ಈ ಕುರಿತು ಹೈಕಮಾಂಡ್ ಇನ್ನೂ ಯಾವುದೇ ಅಧಿಕೃತ ಸೂಚನೆ ನೀಡಿಲ್ಲ. ಈ ನಡುವೆ ಸಿದ್ದರಾಮಯ್ಯ ಅವರ ದಿಢೀರ್ ದೆಹಲಿ ಪ್ರವಾಸದ ಸುದ್ದಿ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

- Advertisement -spot_img

More articles

- Advertisement -spot_img

Latest article