No menu items!
12.1 C
Munich
Wednesday, May 20, 2026

‘ಗುಂಡಿ ಹಣ ಗುಂಡಿಗೆ!’: ರಸ್ತೆ ಕಾಮಗಾರಿಗಳಲ್ಲಿ ಅಕ್ರಮ ಆರೋಪ, ಸದನ ಸಮಿತಿ ತನಿಖೆಗೆ ಆರ್. ಅಶೋಕ್ ಆಗ್ರಹ

Must read

‘ಗುಂಡಿ ಹಣ ಗುಂಡಿಗೆ!’: ರಸ್ತೆ ಕಾಮಗಾರಿಗಳಲ್ಲಿ ಅಕ್ರಮ ಆರೋಪ, ಸದನ ಸಮಿತಿ ತನಿಖೆಗೆ ಆರ್. ಅಶೋಕ್ ಆಗ್ರಹ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಕೋಟಿ ಕೋಟಿ ರೂಪಾಯಿ ಖರ್ಚು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗುಂಡಿ ಮುಚ್ಚುವ ಹೆಸರಿನಲ್ಲಿ ಖರ್ಚು ಮಾಡಿರುವ ಹಣವೇ ‘ಗುಂಡಿಗೆ ಹೋಗಿದೆ’ ಎಂದು ಟೀಕಿಸಿದ ಅವರು, ಒಂದು ಗುಂಡಿ ಮುಚ್ಚಲು ಲಕ್ಷಾಂತರ ರೂಪಾಯಿ ಖರ್ಚು ಮಾಡುವುದೇ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಬೆಂಗಳೂರಿನ ಜನರು ಈ ಪರಿಸ್ಥಿತಿಯಿಂದ ಬೇಸತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಬೆಲೆ ಏರಿಕೆ ಮಾಡಿರುವ ಸರ್ಕಾರ, ಗುಂಡಿ ಮುಚ್ಚುವ ಕಾಮಗಾರಿಗಳಲ್ಲಿಯೂ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿದ ಅಶೋಕ್, ಈ ವೆಚ್ಚ ಸಂಪೂರ್ಣ ಬೋಗಸ್ ಎಂದು ಹೇಳಿದ್ದಾರೆ. ಈ ಸಂಬಂಧ ಸಮಗ್ರ ತನಿಖೆ ನಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇದರ ಜೊತೆಗೆ, ವಿಧಾನಸಭೆಯ ಸಮಿತಿಯನ್ನು ರಚಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ ಅವರು, ನಾವು ಕೂಡ ಸರ್ಕಾರದ ವಿರುದ್ಧ ಸಾಕ್ಷ್ಯಾಧಾರಗಳೊಂದಿಗೆ ಲೆಕ್ಕ ನೀಡಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಮುಚ್ಚಿದ ಗುಂಡಿಗಳು ಮತ್ತೆ ತೆರೆಯುತ್ತಿರುವುದೇ ಕಾಮಗಾರಿಗಳ ಗುಣಮಟ್ಟದ ಮೇಲೆ ಪ್ರಶ್ನೆ ಎಬ್ಬಿಸುತ್ತಿದ್ದು, ಈ ‘ಗುಂಡಿ ಲೆಕ್ಕ’ವನ್ನು ಬಹಿರಂಗಪಡಿಸುತ್ತೇವೆ ಎಂದು ಅಶೋಕ್ ಎಚ್ಚರಿಕೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article