ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಕ್ರೀಡಾಕೂಟ ಮುಕ್ತಾಯಗೊಳ್ಳಲು ಇನ್ನೆರಡು ದಿನ ಬಾಕಿ ಇದ್ದು, ಕಳೆದ ಬಾರಿಗಿಂದ ಈ ಬಾರಿ ಭಾರತ ಹೆಚ್ಚು ಪದಕಗಳನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವ ಭರವಸೆ ಮೂಡಿದೆ.
ಇಂದು ಕೂಡ ಭಾರತಕ್ಕೆ 3 ಚಿನ್ನ ಲಭಿಸಿದೆ.
50 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಸಂಜೀವ್ ರಜಪೂತ್, ಪುರುಷರ ಬಾಕ್ಸಿಂಗ್ 52 ಕೆಜಿ ವಿಭಾಗದಲ್ಲಿ ಗೌರವ್ ಸೋಲಂಕಿ ಹಾಗೂ 125 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಸಮಿತ್ ಮಲಿಕ್ ಚಿನ್ನ ಗೆದ್ದಿದ್ದಾರೆ.
ಬಾಕ್ಸರ್ ಮನೀಶ್ ಕೌಶಿಕ್ ಪುರುಷರ 60 ಕೆಜಿ ವಿಭಾಗದ ಫೈನಲ್ ನಲ್ಲಿ ಬೆಳ್ಳಿ ಗೆದ್ದುಕೊಂಡಿದ್ದಾರೆ.