ಬೆಂಗಳೂರು : ಸಿದ್ದು ಮತ್ತು ಡಿಕೆಶಿ ನಡುವಿನ ಒಳಜಗಳ ಸಂಬಂಧ ರಾಹುಲ್ ಸಂಧಾನ ಮಾಡಿರುವ ವಿಚಾರದ ಬಗ್ಗೆ ಸ್ವತಹ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಸಿಗದಿದ್ದಾಗಲೇ ನಾನು ಉಸಿರು ಎತ್ತಿಲ್ಲ. ನನ್ನಂತ ನಿಷ್ಠಾವಂತ ಕಾರ್ಯಕರ್ತರನ್ನ ತೋರಿಸಿ ನೋಡೋಣ. ನಮ್ಮ ಸರ್ಕಾರ ಬಂದಾಗ ನನ್ನನ್ನು ಮಂತ್ರಿ ಮಾಡಿಲ್ಲ. ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ.
ಆಗ ಪ್ರಚಾರ ಸಮಿತಿ ಅಧ್ಯಕ್ಷನಾಗಿ ನಾನು ಕೆಲಸ ಮಾಡಿದ್ದೀನಿ. ಪಕ್ಷ ಅಧಿಕಾರಕ್ಕೆ ಬರದಿದ್ದರೂ ವಿಪಕ್ಷ ನಾಯಕರನ್ನಾಗಿ ಮಾಡಿದ್ದೇವೆ. ನಮಗೆ ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ. ಸಾಮೂಹಿಕ ನಾಯಕತ್ವದಲ್ಲಿ 2023ರ ಚುನಾವಣೆ ಎದುರಿಸಲಿದ್ದೇವೆ. ಕಾಂಗ್ರೆಸ್ನ ಎಲ್ಲ ನಾಯಕರು ಸೇರಿ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.