ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಬದಲಾಗ್ತಾರಾ ?

0
60

ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಬೇಕು ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್‌ ಬಾಬು ಆಗ್ರಹಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ರಮೇಶ್‌ ಬಾಬು ಪತ್ರ ಬರೆದಿದ್ದಾರೆ. ಖರ್ಗೆ ಅವರು ೧೯೭೨ರಲ್ಲಿ ರಾಜಕೀಯ ಜೀವನ ಆರಂಭಿಸಿದ್ದು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಹುದ್ದೆಯನ್ನು ವಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಈ ಸಂದರ್ಭದಲ್ಲಿ ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಖರ್ಗೆ ಅವರನ್ನು AICC ಅಧ್ಯಕ್ಷರನ್ನಾಗಿಸಲು ರಾಜ್ಯ ಕಾಂಗ್ರೆಸ್ ಒತ್ತಾಸೆಯಾಗಬೇಕು ಎಂದು ಹೇಳಿದ್ದಾರೆ. ಇನ್ನೂ ಭಾರತ್ ಜೋಡೊ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್‌ ಸಕ್ರಿಯವಾಗಿದ್ದಾರೆ‌. ರಾಜ್ಯ ಸೇರಿದಂತೆ ಬೇರೆ ಕಡೆಯೂ ಖರ್ಗೆ ಅವರ ಪರ ಅಭಿಪ್ರಾಯ ವ್ಯಕ್ತವಾಗಿದೆ‌ ಎಂದಿದ್ದಾರೆ.

LEAVE A REPLY

Please enter your comment!
Please enter your name here