No menu items!
4.4 C
Munich
Tuesday, April 21, 2026

ಇದು ಸದ್ಯದ ಕೋವಿಡ್ ನ ಅಪ್ ಡೇಟ್

Must read

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ 746 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,06,716ಕ್ಕೆ ಏರಿಕೆ ಆಗಿದೆ. ನಿನ್ನೆ 573 ಮಂದಿ ಬಿಡುಗಡೆಯಾಗಿದ್ದಾರೆ. ಈವರೆಗೂ ಕೋವಿಡ್ ಸಾವಿನ ಸಂಖ್ಯೆ16,969 ಇದೆ.

 

ರಾಜಧಾನಿಯಲ್ಲಿ 6,248 ಸಕ್ರಿಯ ಪ್ರಕರಣಗಳಿವೆ. ಅದರಂತೆ ರಾಜ್ಯದಲ್ಲಿ ನಿನ್ನೆ 826 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ.

22,348 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಆ ಪೈಕಿ 826 ಮಂದಿಗೆ ಸೋಂಕು ದೃಢಪಟ್ಟಿದೆ. 600 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ 6,666 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article