ಕೇಂದ್ರ ಸರ್ಕಾರ ಬರೆದ ಪತ್ರದಲ್ಲಿ ಏನಿದೇ ?

1
60

ಬೆಂಗಳೂರು : ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ ಹಾಗೂ ಕೇರಳ ರಾಜ್ಯಗಳಿಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಾ ಇದ್ದು , ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕೋವಿಡ್ ಹೆಚ್ಚಾಗುತ್ತಿರುವ ಕಾರಣ ತೀವ್ರ ನಿಗಾವಹಿಸುವಂತೆ ಸೂಚನೆ ನೀಡಿದ್ದಾರೆ . ಜಿನೋಮ್ ಸೀಕ್ವೆನ್ಸ್ ಪರೀಕ್ಷೆ. ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ರಾಜ್ಯಗಳಿಗೆ ಸೂಚಿಸಿದೆ. ಇದೇ ಶೀತ, ಕೆಮ್ಮು, ಜ್ವರ ಕಾಣಿಸಿದರೂ ಸೂಕ್ತ ಚಿಕಿತ್ಸೆ ಜೊತೆಗೆ ಕೋವಿಡ್ ಪರೀಕ್ಷೆ ಮಾಡಿಸಲು ಸೂಚಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,945 ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ ಎರಡು ದಿನಗಳಿಂದ 4 ಸಾವಿರದ ಸಮೀಪದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ.

ಇದಕ್ಕೂ ಮುನ್ನ ಗುರುವಾರ 4,041 ಪ್ರಕರಣಗಳು ದಾಖಲಾಗಿದ್ದವು. ಇದು ಕಳೆದ ಮೂರು ತಿಂಗಳಲ್ಲೇ ಗರಿಷ್ಠ ಪ್ರಕರಣಗಳಾಗಿದೆ. ಶುಕ್ರವಾರ, 2,672 ರೋಗಿಗಳು ಗುಣಮುಖರಾಗಿದ್ದರೆ, 26 ಸೋಂಕಿತರು ಸಾವನ್ನಪ್ಪಿದ್ದಾರೆ.

 

 

 

ಈಗ 2,162 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಇದುವರೆಗೆ 4.32 ಕೋಟಿ ಜನರು ಕೊರೊನಾ ಪಾಸಿಟಿವ್ ಗೆ ಒಳಗಾಗಿದ್ದಾರೆ. ಈ ಪೈಕಿ 4.26 ಕೋಟಿ ಮಂದಿ ಗುಣಮುಖರಾಗಿದ್ದಾರೆ. 5.24 ಲಕ್ಷ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

 

 

 

ಹೆಚ್ಚುತ್ತಿರುವ ಕರೋನಾ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರವು ರಾಜ್ಯದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶುಕ್ರವಾರ ನಡೆದ ಕರೋನಾ ಸಭೆಯಲ್ಲಿ, ಸಿಎಂ ಉದ್ಧವ್ ಠಾಕ್ರೆ ಅವರು ಪ್ರಕರಣಗಳು ಹೆಚ್ಚಾದರೆ ಮುಂಬರುವ ಸಮಯದಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸುವುದಾಗಿ ಸೂಚಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here