ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕೇಂದ್ರ ಆರೋಗ್ಯ ಇಲಾಖೆ

Date:

ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಪತ್ರ ಬರೆದಿದೆ. ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್  ಅವರಿಗೆ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದು, ಕಳೆದ ಒಂದು ತಿಂಗಳಿನಲ್ಲಿ ಕರ್ನಾಟಕದಲ್ಲಿ ಹೈ ಎವರೇಜ್ ಹೊಸ ಪ್ರಕರಣಗಳು ವರದಿಯಾಗಿವೆ.

 

ದೇಶದ ವಾರದ ಹೊಸ ಪ್ರಕರಣಗಳ ಪೈಕಿ ಕರ್ನಾಟಕದಲ್ಲಿ 10.1% ವರದಿಯಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲಿ ವಾರದ ಪಾಸಿಟಿವಿಟಿ ರೇಟ್ ನಿನ್ನೆಗೆ 6.28% ಇದೆ. ಸೋಂಕು ಹರದಡಂತೆ ತಡೆಯಲು ಕ್ರಮಗಳ ತುರ್ತು ಕ್ರಮ ಕೈಗೊಳ್ಳಿ. 24 ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಜಾಸ್ತಿ ಇದೆ. ಮುಂದಿನ ತಿಂಗಳುಗಳಲ್ಲಿ ಹಬ್ಬಗಳ ಕಾರಣದಿಂದ ಸಾಮೂಹಿಕ ಜನ ಸೇರುವ ಸಂಭವ ಇರುತ್ತದೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಸರಿಯಾದ ಟೆಸ್ಟಿಂಗ್ ಬಗ್ಗೆ ರಾಜ್ಯ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ. ಹೆಚ್ಚು ಪ್ರಕರಣ ವರದಿಯಾಗುವ ಜಿಲ್ಲೆಗಳು, ಪಾಸಿಟಿವಿಟಿ ರೇಟ್, ಕ್ಲಸ್ಟರ್​ಗಳ ಮೇಲೆ ಸೂಕ್ತ ನಿಗಾ ಇಡಬೇಕು. ಐಎಲ್ಐ ಮತ್ತು ಸಾರಿ ಪ್ರಕರಣಗಳ ಮೇಲೆ ಸೂಕ್ಷ್ಮ ನಿಗಾ ಇಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಜೀನೋಮ್ ಸೀಕ್ವೆನ್ಸಿಂಗ್ ಅಗತ್ಯ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...