ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾ ನಡುವಿನ ತ್ರಿಕೋನ ಟಿ20 ಸರಣಿಯಲ್ಲಿ ಹಿಂದಿನ ಎರಡು ಪಂದ್ಯಗಳಲ್ಲಿ ಒಂದು ಸೋಲು ಮತ್ತು ಒಂದು ಗೆಲುವಿನೊಂದಿಗೆ ಮಿಶ್ರ ಫಲ ಅನುಭವಿಸಿರುವ ಭಾರತ ಇಂದು ಶ್ರೀಲಂಕಾವನ್ನು ಎದುರಿಸಲಿದೆ.
ರನ್ ಮಷಿನ್ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ತಂಡಕ್ಕೆ ಆಸರೆಯಾಗುವಲ್ಲಿ ವಿಫಲರಾಗಿದ್ದು , ಈ ಪಂದ್ಯದಲ್ಲಿ ಸಿಡಿದೇಳುವ ವಿಶ್ವಾಸದಲ್ಲಿದ್ದಾರೆ. ಅದೇರೀತಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸ್ಥಾನವನ್ನು ತುಂಬಲು ಉತ್ಸುಕರಾಗಿರುವ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.
ಭಾರತದ ಪರ ಶಿಖರ್ ಧವನ್ ಸತತ ಎರಡು ಪಂದ್ಯಗಳಲ್ಲಿಯೂ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯಲ್ಲಿಯೂ ಧವನ್ ಉತ್ತನ ಆಟ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲೂ ತಂಡಕ್ಕೆ ಆಧಾರವಾಗುತ್ತಾರೆ ಎಂದು ನಂಬಲಾಗಿದೆ.
ರಿಷಬ್ ಪಂತ್ ವೈಪಲ್ಯದ ಹಿನ್ನೆಲೆಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಗೆ ಅವಕಾಶ ಸಿಗುವ ನಿರೀಕ್ಷೆ ಇದೆ. ಇಂದಾದರೂ ಕನ್ನಡಿಗನಿಗೆ ಮಣೆಹಾಕುತ್ತಾರೋ ಕಾದು ನೋಡಬೇಕು.
ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.