No menu items!
16.9 C
Munich
Friday, October 2, 2026

ರಸ್ತೆ ಬದಿಯ ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಎಸ್ಕೇಪ್; ಸಿಸಿಟಿವಿ ಸುಳಿವಿನಿಂದ ಪ್ರಮುಖ ಆರೋಪಿ ಅರೆಸ್ಟ್

Must read

ರಸ್ತೆ ಬದಿಯ ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಎಸ್ಕೇಪ್; ಸಿಸಿಟಿವಿ ಸುಳಿವಿನಿಂದ ಪ್ರಮುಖ ಆರೋಪಿ ಅರೆಸ್ಟ್

ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಅತ್ಯಂತ ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆಯ ನಿವಾಸಿ ಮೊಹಮ್ಮದ್ ಸಿನಾನ್ (20) ಬಂಧಿತ ಆರೋಪಿಯಾಗಿದ್ದು, ಕೃತ್ಯಕ್ಕೆ ಬಳಸಿದ್ದ ಬಿಳಿ ಬಣ್ಣದ ಸ್ವಿಫ್ಟ್ ಡಿಜೈರ್ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೆಪ್ಟೆಂಬರ್ 29ರಂದು ಮಧ್ಯಾಹ್ನ 1:30ರ ಸುಮಾರಿಗೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು, ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಕಾರಿನೊಳಗೆ ತುರುಕಿ ಪರಾರಿಯಾಗಿದ್ದರು. ಈ ಸಂಪೂರ್ಣ ಕೃತ್ಯದ ದೃಶ್ಯಾವಳಿ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

 ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣವೇ ರಂಗಕ್ಕಿಳಿದ ಪೊಲೀಸರು ತನಿಖೆ ನಡೆಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ಪತ್ತೆಹಚ್ಚಿ ಪ್ರಮುಖ ಆರೋಪಿ ಮೊಹಮ್ಮದ್ ಸಿನಾನ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -spot_img

More articles

- Advertisement -spot_img

Latest article