No menu items!
12 C
Munich
Monday, October 5, 2026

ಮನ್ ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಬಂಧನ

Must read

ಮನ್ ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಬಂಧನ

ಮಂಡ್ಯ: ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಮಂಡ್ಯದ ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಮುಲ್ ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅವರನ್ನು ಮದ್ದೂರು ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ವೇಳೆ ಶಿವಪ್ಪ ಅವರ ಪಾತ್ರದ ಬಗ್ಗೆ ಮಹತ್ವದ ಸುಳಿವುಗಳು ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಬಂಧನದ ಬಳಿಕ ಇಂದು ಶಿವಪ್ಪ ಅವರನ್ನು ಮದ್ದೂರು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.
ಈ ಪ್ರಕರಣದ ಪ್ರಮುಖ ಆರೋಪಿ ಪ್ರದೀಪ್ ಕುಮಾರ್ ಜಾದವ್ (A1) ಅವರು ಒಬ್ಬ ನಿರ್ದೇಶಕರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆ ತನಿಖೆಯಲ್ಲಿ ಪ್ರಮುಖ ಸುಳಿವಾಗಿ ಹೊರಹೊಮ್ಮಿತ್ತು. ಈ ಸಂಭಾಷಣೆಯಲ್ಲಿ ಹಾಲಿನ ಪುಡಿ ಕಲಬೆರಕೆ ಅಕ್ರಮದಲ್ಲಿ ಮಾಜಿ ಅಧ್ಯಕ್ಷ ಶಿವಪ್ಪ ಅವರ ಪಾತ್ರದ ಬಗ್ಗೆಯೂ ಪ್ರಸ್ತಾಪವಾಗಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜಾದವ್ ಅವರನ್ನು ಪೊಲೀಸರು ಮತ್ತೆ ತಮ್ಮ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆಯ ವೇಳೆ ಜಾದವ್ ಮತ್ತು ಮಾಜಿ ಅಧ್ಯಕ್ಷ ಶಿವಪ್ಪ ಅವರನ್ನು ಮುಖಾಮುಖಿಯಾಗಿ ಕೂರಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಜಾದವ್ ಅವರು ಶಿವಪ್ಪ ವಿರುದ್ಧವೇ ಅಕ್ರಮದ ಆರೋಪಗಳನ್ನು ಮಾಡಿದ್ದು, ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ವಿಚಾರಣೆಯಿಂದ ಶಿವಪ್ಪ ಅವರ ಪಾತ್ರದ ಕುರಿತು ಮಹತ್ವದ ಸುಳಿವುಗಳು ಲಭ್ಯವಾದ ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಪ್ರಮುಖ ಆರೋಪಿ ಪ್ರದೀಪ್ ಕುಮಾರ್ ಜಾದವ್ ಸೇರಿದಂತೆ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅವರ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಆರುಕ್ಕೆ ಏರಿಕೆಯಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಅಕ್ರಮದ ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯೂ ಇದೆ.

- Advertisement -spot_img

More articles

- Advertisement -spot_img

Latest article