No menu items!
16.4 C
Munich
Thursday, June 18, 2026

ತುಮಕೂರಿನಲ್ಲಿ ಕೌಟುಂಬಿಕ ಕಲಹದ ದುರಂತ: ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!

Must read

ತುಮಕೂರಿನಲ್ಲಿ ಕೌಟುಂಬಿಕ ಕಲಹದ ದುರಂತ: ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!

ತುಮಕೂರು: ಒಂದೇ ಕುಟುಂಬದ ಮೂವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತರನ್ನು ಶಿವಣ್ಣ (40) ಹಾಗೂ ಅವರ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (6) ಎಂದು ಗುರುತಿಸಲಾಗಿದೆ.
ಮನೆಯೊಳಗೆ ಶಿವಣ್ಣ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಮಕ್ಕಳ ಮೃತದೇಹಗಳು ಮಂಚದ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಕಂಡುಬಂದಿವೆ. ಪ್ರಾಥಮಿಕ ತನಿಖೆ ಪ್ರಕಾರ, ಕುಟುಂಬ ಕಲಹದ ಹಿನ್ನೆಲೆ ಮಕ್ಕಳನ್ನು ಹತ್ಯೆಗೈದು ಬಳಿಕ ಶಿವಣ್ಣ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಕೌಟುಂಬಿಕ ಕಲಹದ ಕಾರಣ ಶಿವಣ್ಣನ ಪತ್ನಿ ಕೆಲಕಾಲದಿಂದ ದೂರವಾಗಿದ್ದರು. ಈ ವಿಚಾರ ಪೊಲೀಸ್ ಠಾಣೆಯ ಮಟ್ಟಕ್ಕೂ ತಲುಪಿದ್ದು, ಈ ಬೆಳವಣಿಗೆಗಳಿಂದ ಮನನೊಂದ ಶಿವಣ್ಣ ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆಯ ಸಿಪಿಐ ಮಾಧ್ಯ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಈ ಘಟನೆ ಆಲ್ಕೆರೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.

- Advertisement -spot_img

More articles

- Advertisement -spot_img

Latest article