No menu items!
21 C
Munich
Saturday, May 9, 2026

ಆಟವಾಡುತ್ತಿದ್ದ ಮಕ್ಕಳ ಮೇಲೆ ಕಾಂಪೌಂಡ್ ಗೇಟ್ ಬಿದ್ದು ದುರಂತ; 5 ವರ್ಷದ ಮಗು ಸಾವು

Must read

ಆಟವಾಡುತ್ತಿದ್ದ ಮಕ್ಕಳ ಮೇಲೆ ಕಾಂಪೌಂಡ್ ಗೇಟ್ ಬಿದ್ದು ದುರಂತ; 5 ವರ್ಷದ ಮಗು ಸಾವು

ಬೆಂಗಳೂರು: ಮಕ್ಕಳ ಗುಂಪೊಂದು ಆಟವಾಡುತ್ತಿದ್ದ ವೇಳೆ ಏಕಾಏಕಿ ಕಾಂಪೌಂಡ್ ಗೇಟ್ ಬಿದ್ದು 5 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರದ ದ್ವಾರಕಾನಗರದಲ್ಲಿ ನಡೆದಿದೆ.
ಅವಘಡದಲ್ಲಿ ಮೃತಪಟ್ಟ ಮಗುವನ್ನು ಗೌಸಿಯಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅಣ್ಣ ಇಮಾಮ್ ಹಾಗೂ ತಂಗಿ ಶಕಿಲಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ 3 ವರ್ಷದ ಮಗು ಸುಮಯ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಮೃತ ಗೌಸಿಯಾ ಇಮಾಮ್ ಮತ್ತು ರಮೀಜಾ ದಂಪತಿಯ ಪುತ್ರಿಯಾಗಿದ್ದಾಳೆ. ಈ ಕುಟುಂಬ ಕಳೆದ ಐದು ತಿಂಗಳ ಹಿಂದಷ್ಟೇ ಬಾಡಿಗೆ ಮನೆಗೆ ವಾಸಕ್ಕೆ ಬಂದಿತ್ತು. ದಂಪತಿ ಬಸ್ ನಿಲ್ದಾಣದ ಬಳಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.
ಘಟನೆ ನಡೆದ ಮನೆ ರವಿಶಂಕರ್ ಎಂಬುವವರಿಗೆ ಸೇರಿದ್ದು, ಮಕ್ಕಳು ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಭಾರವಾದ ಕಾಂಪೌಂಡ್ ಗೇಟ್ ಏಕಾಏಕಿ ಕುಸಿದು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article