No menu items!
15.1 C
Munich
Saturday, June 13, 2026

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

Must read

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು, ಮಾ. 22: ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಮಾಹಿತಿಯ ಪ್ರಕಾರ, ದೆಹಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಾಟ ಮಾಡಲಾಗುತ್ತಿದ್ದು, ಆರೋಪಿಗಳು ನಾಯಿ ಆಹಾರದ ಪ್ಯಾಕೇಟ್‌ಗಳಲ್ಲಿ ಡ್ರಗ್ಸ್ ಅಡಗಿಸಿ ಕಳುಹಿಸುತ್ತಿದ್ದರು. ಈ ಸಾಗಾಟವನ್ನು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೂಲಕ ನಡೆಸಲಾಗುತ್ತಿತ್ತು.


ರೈಲಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ವೇಳೆ ಮುಖ್ಯ ಆರೋಪಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನು ಕೂಡ ಬಂಧಿಸಲಾಗಿದೆ.
ಇನ್ನು, ಬೆಂಗಳೂರಿನಲ್ಲಿರುವ ಆರೋಪಿಗಳ ಮನೆಯಲ್ಲಿ ಶೋಧ ನಡೆಸಿದ ವೇಳೆ 40 ಡೆಬಿಟ್ ಕಾರ್ಡ್‌ಗಳು ಹಾಗೂ 70ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯಿಂದ ದೊಡ್ಡ ಮಟ್ಟದ ಡ್ರಗ್ಸ್ ಜಾಲ ಬಯಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಅಧಿಕಾರಿಗಳು ಮುಂದುವರೆಸಿದ್ದಾರೆ.

- Advertisement -spot_img

More articles

- Advertisement -spot_img

Latest article