No menu items!
33 C
Munich
Friday, June 19, 2026

ಮಾಜಿ ಸಚಿವ ವೆಂಕಟರಮಣಪ್ಪ ನಿಧನ; ಗುರುಭವನದಲ್ಲಿ ಅಂತಿಮ ದರ್ಶನ

Must read

ಮಾಜಿ ಸಚಿವ ವೆಂಕಟರಮಣಪ್ಪ ನಿಧನ; ಗುರುಭವನದಲ್ಲಿ ಅಂತಿಮ ದರ್ಶನ

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಸುಮಾರು 6 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.
ಅವರು ಪುತ್ರ ಹಾಗೂ ಶಾಸಕ ಹೆಚ್.ವಿ. ವೆಂಕಟೇಶ್, ಪುತ್ರಿ ಪದ್ಮಾವತಿ ಸೇರಿದಂತೆ ಕುಟುಂಬ ಸದಸ್ಯರನ್ನು ಅಗಲಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೆಂಕಟರಮಣಪ್ಪ ಅವರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗಿನ ಜಾವ ಆಸ್ಪತ್ರೆಯಲ್ಲೇ ನಿಧನರಾದರು.
ರಾಜಕೀಯ ಜೀವನದಲ್ಲಿ ವೆಂಕಟರಮಣಪ್ಪ ಅವರು 2008ರಲ್ಲಿ ರೇಷ್ಮೆ ಹಾಗೂ ಸಣ್ಣ ಕೈಗಾರಿಕಾ ಸಚಿವರಾಗಿ, 2018ರಲ್ಲಿ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಮೃತರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ ತುಮಕೂರಿನ ಗುರುಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article