No menu items!
16.5 C
Munich
Tuesday, July 7, 2026

ಸ್ಯಾಂಕಿ ಕೆರೆಯಲ್ಲಿ 20 ವರ್ಷದ ವಿದ್ಯಾರ್ಥಿನಿಯ ಶವ ಪತ್ತೆ!

Must read

ಸ್ಯಾಂಕಿ ಕೆರೆಯಲ್ಲಿ 20 ವರ್ಷದ ವಿದ್ಯಾರ್ಥಿನಿಯ ಶವ ಪತ್ತೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸದಾಶಿವನಗರ ವ್ಯಾಪ್ತಿಯ ಸ್ಯಾಂಕಿ ಕೆರೆಯಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತಳನ್ನು ಚಿಕ್ಕಬಾಣಾವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ.
ಸೋಮವಾರ (ಜು.6) ತೇಜು ಸ್ಯಾಂಕಿ ಕೆರೆ ಬಳಿ ಬಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇಂದು ಬೆಳಗಿನ ಜಾವ ಕೆರೆಯಲ್ಲಿ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸದಾಶಿವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಪ್ರೀತಿ ವಿಚಾರವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ತೇಜು ತನ್ನ ಗೆಳೆಯನಿಗೆ “ನನಗೆ ಜೀವನ ಸಾಕಾಗಿದೆ” ಎಂದು ಸಂದೇಶ ಕಳುಹಿಸಿದ್ದು, ಬಳಿಕ ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಸದಾಶಿವನಗರ ಪೊಲೀಸರು ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಕುಟುಂಬಸ್ಥರು ಹಾಗೂ ಆಕೆಯ ಸ್ನೇಹಿತರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

- Advertisement -spot_img

More articles

- Advertisement -spot_img

Latest article