No menu items!
21 C
Munich
Wednesday, August 5, 2026

ಪತಿ, ನಾದಿನಿಯನ್ನು ಸುಮ್ಮನೆ ಬಿಡಬೇಡ ಎಂದು ಡೆತ್ ನೋಟ್ ಬರೆದು ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ಆತ್ಮಹತ್ಯೆ!

Must read

ಪತಿ, ನಾದಿನಿಯನ್ನು ಸುಮ್ಮನೆ ಬಿಡಬೇಡ ಎಂದು ಡೆತ್ ನೋಟ್ ಬರೆದು ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಅವರು ಬರೆದಿಟ್ಟಿರುವ ಡೆತ್ನೋಟ್ನಲ್ಲಿ ಪತಿ ಹಾಗೂ ಪತಿಯ ಅಕ್ಕನ ವಿರುದ್ಧ ಕಿರುಕುಳದ ಗಂಭೀರ ಆರೋಪ ಮಾಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಮೃತರನ್ನು ಚಿಕ್ಕಮಗಳೂರು ಮೂಲದ 25 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಪತಿಯೊಂದಿಗೆ ವಾಸವಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ಬೆಂಗಳೂರಿನ ಕಮಲನಗರದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪ್ರೇಮ ವಿವಾಹವಾಗಿತ್ತು.
ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಶ್ವೇತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೂ ಮುನ್ನ ತಾಯಿಯನ್ನು ಉದ್ದೇಶಿಸಿ ಬರೆದಿರುವ ಡೆತ್ನೋಟ್ನಲ್ಲಿ, ತಮ್ಮ ಸಾವಿಗೆ ಪತಿ ಹಾಗೂ ಅವರ ಅಕ್ಕನೇ ಕಾರಣ ಎಂದು ಆರೋಪಿಸಿದ್ದಾರೆ. ಅವರಿಂದ ನಿರಂತರ ಮಾನಸಿಕ ಹಿಂಸೆ ಅನುಭವಿಸುತ್ತಿದ್ದೆ. ಬದುಕುವ ಆಸೆಯೇ ಇಲ್ಲದಂತೆ ಮಾಡಿದ್ದರು. ನನ್ನ ಸಾವಿಗೆ ಕಾರಣರಾದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬೇಡಿ ಎಂದು ತಾಯಿಗೆ ಮನವಿ ಮಾಡಿದ್ದಾರೆ. ಜೊತೆಗೆ ತಮ್ಮಿಂದಾದ ತಪ್ಪಿಗೆ ಕ್ಷಮೆಯಾಚಿಸಿ ಭಾವನಾತ್ಮಕವಾಗಿ ಪತ್ರವನ್ನು ಮುಕ್ತಾಯಗೊಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್ನೋಟ್ ಅನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಮೃತೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಡೆತ್ನೋಟ್ ಸೇರಿದಂತೆ ಲಭ್ಯವಿರುವ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article