No menu items!
12.5 C
Munich
Friday, September 11, 2026

ಬೆಂಗಳೂರಲ್ಲಿ ಹಿಟ್ ಅಂಡ್ ರನ್: ಅಪರಿಚಿತ ವ್ಯಕ್ತಿ ಸಾವು

Must read

ಬೆಂಗಳೂರಲ್ಲಿ ಹಿಟ್ ಅಂಡ್ ರನ್: ಅಪರಿಚಿತ ವ್ಯಕ್ತಿ ಸಾವು
ಬೆಂಗಳೂರು: ನಗರದ ಮಡಿವಾಳ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಡಿವಾಳ ಭಾಗದಲ್ಲಿ ಗುಜರಿ ಆಯುತ್ತಿದ್ದ ವ್ಯಕ್ತಿ ರಾತ್ರಿ ಸುಮಾರು 10 ಗಂಟೆ ವೇಳೆಗೆ ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ಸಮೇತ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ.
ಡಿಕ್ಕಿಯ ರಭಸಕ್ಕೆ ವ್ಯಕ್ತಿಯ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಮಡಿವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಪರಾರಿಯಾಗಿರುವ ಸವಾರನ ಪತ್ತೆಗಾಗಿ ಸ್ಥಳದಲ್ಲಿರುವ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article